ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಸಾವು

ಕಾರವಾರ: ವಾಹನ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದೆ.
ಮೃತನನ್ನು ಧಾರವಾಡ ಜಿಲ್ಲೆಯ  ಮೈಲಾರಿ ಸಹದೇವಪ್ಪ  ಜರಗ (23) ಎಂದು ಗುರುತಿಸಲಾಗಿದೆ. ಈತ ಹುಬ್ಬಳ್ಳಿಯಿಂದ ಕಾರವಾರ ನಗರಕ್ಕೆ ಇಲೆಕ್ಟ್ರಿಕಲ್ ಸಾಮಗ್ರಿಗಳನ್ನು ಪೂರೈಸುತ್ತಿದ್ದ ಎನ್ನಲಾಗಿದ್ದು, ಶುಕ್ರವಾರ ಅಣಶಿ ಮಾರ್ಗವಾಗಿ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಟಾಟಾ ಏಸ್ ವಾಹನದಲ್ಲಿಯೇ ಹೃದಯಾಘಾತ ಆಗಿದೆ ಎನ್ನಲಾಗಿದೆ.

ಈ ವೇಳೆ ವಾಹನ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದಾನೆ. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ಗೊತ್ತಾಗಿದೆ. ಸದ್ಯ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿದ್ದು, ಪಂಚನಾಮೆ ನಡೆಸಿದ್ದಾರೆ.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ನಿಮ್ಮ ಕಾಮೆಂಟ್ ಬರೆಯಿರಿ

advertisement