ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್‌ ಇಳಿಕೆ ಮಾಡಿ ವಾಹನ ಸವಾರರಿಗೆ ನೆಮ್ಮದಿ ಸುದ್ದಿ ಕೊಡುವರೇ ಸಿಎಂ ಬೊಮ್ಮಾಯಿ..?

ಪೆಟ್ರೋಲ್, ಡೀಸೆಲ್ ಸೆಸ್ ಇಳಿಕೆಗೆ ಚಿಂತನೆ?

ಬೆಂಗಳೂರು: ಏರುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆಯಿಂದಾಗಿ ಜನ ಸಾಮಾನ್ಯರಿಗೆ ತೊಂದರೆಯಾಗಿದೆ. ಹೀಗಾಗಿ ರಾಜ್ಯದಲ್ಲೂ ತಮಿಳುನಾಡು ಮಾದರಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಇಳಿಕೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸಂಪುಟ ಸಭೆಯಲ್ಲಿ ಸೆಸ್ ಕಡಿಮೆ ಮಾಡುವ ವಿಚಾರವನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಪ್ರಸ್ತಾಪ ಮಾಡಿದ್ದು, ಪೆಟ್ರೋಲ್, ಡೀಸೆಲ್ ಬೆಲೆಯಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ನೆರವಿಗೆ ನಿಲ್ಲುವಂತೆ ಅವರು ಮನವಿ ಮಾಡಿದರು. ಬೈರತಿ ಬಸವರಾಜ ಮನವಿಗೆ ಕೆಲ ಸಚಿವರು ಸಹ ಸಹಮತ ವ್ಯಕ್ತಪಡಿಸಿದರು. ಅದಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು , ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದು, ರಾಜ್ಯದಲ್ಲೂ ಸೆಸ್ ಕಡಿಮೆ ಮಾಡುವ ಸುಳಿವು ನೀಡಿದ್ದಾರೆ.
ಅಲ್ಲದೆ, ವಿವಾದಾತ್ಮಕ ಹೇಳಿಕೆ ಕೊಡದಂತೆ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಖಡಕ್ ಸೂಚನೆ ಕೊಟ್ಟಿದ್ದಾರೆ. ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಇನ್ಮುಂದೆ ಯಾರೂ ವಿವಾದಾತ್ಮಕ ಹೇಳಿಕೆ ಕೊಡಬಾರದು ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ. ಪೊಲೀಸ್ ಇಲಾಖೆ , ಗೃಹ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರದಲ್ಲಿ ಹೇಳಿಕೆ ಕೊಡಬೇಡಿ. ಹುಷಾರಾಗಿ ಮಾತಾಡಿ ಎಂದು ಸೂಚಿಸಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement