ಬೆಂಗಳೂರಿನಲ್ಲಿ ಒಂದೇ ಕಾಲೇಜಿನ 16 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು!

ಬೆಂಗಳೂರು: ಶಾಲೆ-ಕಾಲೇಜು ಆರಂಭದ ಬೆನ್ನಲ್ಲೇ ಕೊರೊನಾ ವೈರಸ್ ಸೋಂಕಿನ ಭೀತಿ ಎದುರಾಗಿದ್ದು, ಬೆಂಗಳೂರಿನಲ್ಲಿ ಇಂದು ಒಂದೇ ಕಾಲೇಜಿನಲ್ಲಿ 16 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಬೆಂಗಳೂರಿನ ದಾಸರಹಳ್ಳಿ ವಲಯದ ಚಿಕ್ಕಬಾಣಾವರದಲ್ಲಿರುವ ನರ್ಸಿಂಗ್ ಕಾಲೇಜೊಂದರ 16 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದಯು ವರದಿಯಾಗಿದೆ.
ಮೊದಲು ಕಾಲೇಜಿನ ಒಬ್ಬ ವಿದ್ಯಾರ್ಥಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ನಂತರ ವಿದ್ಯಾರ್ಥಿಯ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.ವರದಿ ಬಂದಿದ್ದು, ಒಟ್ಟು 16 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಸದ್ಯ ಬಿಬಿಎಂಪಿ ಕಾಲೇಜಿನ ಹಾಸ್ಟೆಲ್​ ಅನ್ನು ಮೈಕ್ರೋ ಕಂಟೈನ್ಮೆಂಟ್​ ಝೋನ್​ ಮಾಡಿದೆ. 16 ಮಂದಿ ವಿದ್ಯಾರ್ಥಿಗಳನ್ನು ಕೋವಿಡ್ ಕೇರ್ ಸೆಂಟರ್​ಗೆ ಶಿಫ್ಟ್ ಮಾಡಲಾಗಿದೆ.
ನಿನ್ನೆ ಬೆಂಗಳೂರಿನ ಮಹದೇವಪುರದ ಹೊರಮಾವು ವಾರ್ಡ್​ನ ಕಾಲೇಜಿನಲ್ಲಿ ಒಟ್ಟು 34 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಆಗಿತ್ತು. 12 ವಿದ್ಯಾರ್ಥಿಗಳು ಮತ್ತು 22 ವಿದ್ಯಾರ್ಥಿನಿಯರಿಗೆ ಕೊರೋನಾ ಸೋಂಕು ಪತ್ತೆಯಾಗಿತ್ತು.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement