ಬೊಮ್ಮಾಯಿ ನಾಯಕತ್ವದಲ್ಲೇ ಮುಂದಿನ ಚುನಾವಣೆ: ಅಮಿತ್‌ ಶಾ ಹೇಳಿಕೆಗೆ ಭಿನ್ನ ಹೇಳಿಕೆ ನೀಡಿದ ಸಚಿವ ಈಶ್ವರಪ್ಪ..!

posted in: ರಾಜ್ಯ | 0

ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ರಾಜ್ಯ ಬಿಜೆಪಿಯಲ್ಲಿ ಭಿನ್ನ ಹೇಳಿಕೆಗಳು ಬರುತ್ತಿವೆ. ಸಚಿವ ಕೆ.ಎಸ್.ಈಶ್ವರಪ್ಪ ಕೂಡ ಇದಕ್ಕೆ ಭಿನ್ನ ಹೇಳಿಕೆ ನೀಡಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ ಅವರು ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ, ಅಮಿತ್ ಶಾ ಯಾವ ರೀತಿ ಯಾವ ಅರ್ಥದಲ್ಲಿ ಹೇಳಿದ್ದಾರೆಯೋ ಗೊತ್ತಿಲ್ಲ. ಖಂಡಿತವಾಗಿ ನಮ್ಮೆಲ್ಲರ ಒಲವು ಸಾಮೂಹಿಕ ನಾಯಕತ್ವದ ಬಗ್ಗೆಇದೆ. ಈ ಬಗ್ಗೆ ಎಲ್ಲರೂ ಕುಳಿತು ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸಾಮೂಹಿಕ ನಾಯಕತ್ವದಲ್ಲಿ ಬೊಮ್ಮಾಯಿಯವರ ಪಾತ್ರವೂ ಇರುತ್ತದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುತ್ತಿದ್ದೇವೆ. ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತದೆ ಎಂದು ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ