ಟೋಕಿಯೊ ಪ್ಯಾರಾಲಿಂಪಿಕ್ಸ್: ಮಿಶ್ರ 50 ಮೀಟರ್ ಪಿಸ್ತೂಲ್ ನಲ್ಲಿ ಮನೀಶ್ ನರ್ವಾಲಗೆ ಚಿನ್ನ, ಸಿಂಗರಾಜಗೆ ಬೆಳ್ಳಿ, 15ಕ್ಕೇರಿದ ಭಾರತದ ಪದಕ

ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವು ತನ್ನ ಪದಕದ ಪಟ್ಟಿಯನ್ನು 15ಕ್ಕೆ ಏರಿಸಿದೆ. ಶನಿವಾರ ನಡೆದ ಮಿಶ್ರ 50 ಮೀಟರ್ ಪಿಸ್ತೂಲ್ ಎಸ್‌ಎಚ್ 1 ಶೂಟಿಂಗ್ ಫೈನಲ್‌ನಲ್ಲಿ ಮನೀಶ್ ನರ್ವಾಲ್ ಮತ್ತು ಸಿಂಗ್‌ ರಾಜ್ ಅವರು ಕ್ರಮವಾಗಿ ಚಿನ್ನ ಹಾಗೂ ಬೆಳ್ಳಿ ಪದಕ ಗಳಿಸಿದರು. 19 ವರ್ಷದ ಮನೀಶ್ 218.2 ಅಂಕಗಳ ಹೊಸ ಪ್ಯಾರಾಲಿಂಪಿಕ್ಸ್ ದಾಖಲೆಯೊಂದಿಗೆ ಚಿನ್ನ … Continued

ಎಬಿಪಿ – ಸಿ ವೋಟರ್‌-2022ರ ಚುನಾವಣಾ ಪೂರ್ವ ಸಮೀಕ್ಷೆ: ಉತ್ತರಾಖಂಡದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ

ನವದೆಹಲಿ: ಉತ್ತರಾಖಂಡ ರಾಜ್ಯದಲ್ಲಿ 2022 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಬಿಪಿ-ಸಿ ವೋಟರ್‌ ಮತದಾರರ ಸಮೀಕ್ಷೆ ನಡೆಸಿದೆ. 2017 ರ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಡೆಹ್ರಾಡೂನ್ ಸಿಂಹಾಸನವನ್ನು ವಶಪಡಿಸಿಕೊಂಡಿತ್ತು. ಆದರೆ, ಕಳೆದ ಐದು ವರ್ಷಗಳ ಅವಧಿಯಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಕಂಡಿದ್ದರಿಂದ ಪರಿಸ್ಥಿತಿ ಮೊದಲಿನಂತಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ … Continued

ಪಂಜಾಬಿನಲ್ಲಿ ಎಎಪಿ ಅಧಿಕಾರಕ್ಕೆ ಬರುವ ಸಾಧ್ಯತೆ: ಎಬಿಪಿ-ಸಿ ವೋಟರ್ ಸಮೀಕ್ಷೆ..!

ನವದೆಹಲಿ: ಪಂಜಾಬ್ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಬಹುದು ಹಾಗೂ ಆಮ್ ಆದ್ಮಿ ಪಕ್ಷ ಬಹುಮತದ ತುದಿಗೆ ಬಂದು ನಿಲ್ಲಬಹುದು ಎಂದು ಎಬಿಪಿ-ಸಿವೋಟರ್ ಸಮೀಕ್ಷೆ ಅಂದಾಜಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚೊಚ್ಚಲ ಪ್ರಯತ್ನದಲ್ಲೇ ಪ್ರಮುಖ ಪ್ರತಿಪಕ್ಷವಾಗಿ ಹೊರಹೊಮ್ಮಿದ್ದ ಎಎಪಿ ಇದೀಗ ಅಧಿಕಾರ ಚುಕ್ಕಾಣಿ ಹಿಡಿಯುವ ಸನಿಹದಲ್ಲಿ ಬಂದು ನಿಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ. … Continued

ಕೆಎಸ್‌ಆರ್‌ಟಿಸಿ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು,: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಪುನಶ್ಚೇತನ ಮಾಡಲು ತಜ್ಞರ ಸಮಿತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ. ಸಾರಿಗೆ ಸಂಸ್ಥೆ ಸೇರಿದಂತೆ ಸರ್ಕಾರದ ಹಲವು ಇಲಾಖೆಗಳಲ್ಲಿ ಆದಾಯ ಇಲ್ಲ ಅವುಗಳ ಪುನಶ್ಚೇತನಕ್ಕೆ ಹಾಗೂ ಲಾಭದತ್ತ ಕೊಂಡೊಯ್ಯಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ ನಗರದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ … Continued

ಹೊಸ ಸರ್ಕಾರದಲ್ಲಿ ಹಕ್ಕುಗಳು-ಪಾಲ್ಗೊಳ್ಳುವಿಕೆಗಾಗಿ ಅಫ್ಘಾನಿಸ್ತಾನದ ಮಹಿಳೆಯರ ಪ್ರದರ್ಶನ

ಕಾಬೂಲ್ (ಅಫ್ಘಾನಿಸ್ತಾನ) : ಮಹಿಳಾ ಹಕ್ಕುಗಳ ಕಾರ್ಯಕರ್ತರ ಗುಂಪು ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಹೊಸ ಸರ್ಕಾರದಲ್ಲಿ ಸಮಾನ ಹಕ್ಕುಗಳು ಮತ್ತು ರಾಜಕೀಯ ಭಾಗವಹಿಸುವಿಕೆಗಾಗಿ ಪ್ರದರ್ಶನ ನಡೆಸಿತು. ಭವಿಷ್ಯದ ಸರ್ಕಾರದಲ್ಲಿ ಮಹಿಳೆಯರಿಗೆ ನಿರ್ಧಾರ ತೆಗೆದುಕೊಳ್ಳುವ ಪಾತ್ರಗಳನ್ನು ಖಚಿತಪಡಿಸಿಕೊಳ್ಳಲು ಅಫ್ಘಾನ್ ಮಹಿಳೆಯರು ತಾಲಿಬಾನ್ ಮತ್ತು ಅಂತಾರಾಷ್ಟ್ರೀಯ ಸಮುದಾಯವನ್ನು ಕೇಳಿದರು. TOLOnews ಪ್ರಕಾರ ಮಹಿಳೆಯರಿಗೆ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಹಕ್ಕುಗಳನ್ನು … Continued