ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿ ಕೊಲೆ: ಮಾನವೀಯತೆಯನ್ನೇ ಕೊಂದ ಪಾಪಿಗಳು

ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದಿದೆ. ನಗರದ ಪ್ರಮುಖ ರಸ್ತೆಯಲ್ಲಿದ್ದ ಓಡಾಡುತ್ತಿದ್ದ ಬೀದಿ ನಾಯಿಗಳನ್ನು ಆ್ಯಸಿಡ್ ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಬಗ್ಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾದ ನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉಜ್ಜೈನಿಯ ನಾಗಜಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ಬೀದಿ ನಾಯಿಗಳ ಬಾಯಿಗೆ ಕೆಲವು ಅಪರಿಚಿತ ವ್ಯಕ್ತಿಗಳು ಆ್ಯಸಿಡ್ ಹಾಕಿದ್ದಾರೆ ಎಂದು ಕರೆ ಮಾಡಿದ್ದರು. ಸ್ಥಳಕ್ಕೆ ಧಾವಿಸಿದಾಗ ಘಟನೆ ನಡೆದಿರುವುದು ಬೆಳಕಿಗೆ ಬಂತು ಎಂದು ಪೀಪಲ್ ಫಾರ್ ಅನಿಮಲ್ಸ್ ಇಂದೋರ್ ಘಟಕದ ಅಧ್ಯಕ್ಷ ಪ್ರಿಯಾಂಶು ಜೈನ್ ತಿಳಿಸಿದ್ದಾರೆ. ಆ ಬಳಿಕ ಸಂಸ್ಥೆಯ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೆಲ ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿದ್ದರಿಂದ ಸಂಪೂರ್ಣ ಸುಟ್ಟುಹೋಗಿದೆ. ಹೀಗೆ ಜೀವನ್ಮರಣದ ನಡುವೆ ಹೊರಳಾಡುತ್ತಿದ್ದ ನಾಯಿಗಳನ್ನು ಸ್ಥಳೀಯರು ಪಶು ಆಸ್ಪ್ರತೆಗೆ ದಾಖಲಿಸಿದರೂ ಪ್ರಯೋಜನವಾಗಿಲ್ಲ.
ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಪ್ರಕರಣ ದಾಖಲಿಸಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಸುತ್ತ ಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಪೀಪಲ್ ಫಾರ್ ಅನಿಮಲ್ಸ್ ಸಂಸ್ಥೆಗೆ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ ಮೂಕ ಪ್ರಾಣಿಗಳ ಮೇಲಿನ ಅನುಮಾಷ ಕೃತ್ಯದ ಬಗ್ಗೆ ಸಾರ್ವಜನಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪ್ರಮುಖ ಸುದ್ದಿ :-   ಪಾಕಿಸ್ತಾನದ 19 ವರ್ಷದ ಹುಡುಗಿಗೆ ಹೊಸ ಜೀವನ ನೀಡಿದ 'ಭಾರತದ ಹೃದಯ' ....!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement