ನಾಳೆ ವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ (Rain fall) ಮುಂದುವರೆಯಲಿದೆ. ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಜೋರಾಗಲಿದೆ. ಸೆಪ್ಟೆಂಬರ್ 6ವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ರಾಮನಗರ, ತುಮಕೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಹಳದಿ ಅಲರ್ಟ್​(Yellow Alert) ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸೆ.6ರವರೆಗೂ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಮತ್ತು ನಾಳೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement