ರಾಜಸ್ಥಾನ ಸ್ಥಳೀಯ ಚುನಾವಣೆ: ಮೊದಲನೇ ಸ್ಥಾನ ಪಡೆದ ಕಾಂಗ್ರೆಸ್, ಎರಡನೇ ಸ್ಥಾನಕ್ಕೆ ಕುಸಿದ ಬಿಜೆಪಿ

ಜೈಪುರ: ರಾಜಸ್ಥಾನದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಗಳಿಸಿದೆ. ಬಿಜೆಪಿ ಎರಡನೇ ಸ್ಥಾನ ಪಡೆದಿದೆ.
ರಾಜ್ಯದ ಆರು ಜಿಲ್ಲೆಗಳ 78 ಪಂಚಾಯತ್‌ ಸಮಿತಿಯ 1,564 ಸ್ಥಾನಗಳಿಗೆ ಮತ್ತು ಜಿಲ್ಲಾ ಪರಿಷತ್‌ನ 200 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಫಲಿತಾಂಶ ಪ್ರಕಟವಾಗಿದೆ. ಆಡಳಿತಾರೂಢ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಕಳೆದ ಚುನಾವಣೆಗಳಲ್ಲಿ ಹೆಚ್ಚು ಸ್ಥಾನ ಗೆದ್ದಿದ್ದ ಬಿಜೆಪಿ ಈ ಚುನಾವಣೆಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದೆ.
ಒಟ್ಟು 1,564 ಸ್ಥಾನಗಳಲ್ಲಿ ಕಾಂಗ್ರೆಸ್‌ ಪಕ್ಷವು 670 ಪಂಚಾಯತಿ ಸ್ಥಾನಗಳನ್ನು ಮತ್ತು ಬಿಜೆಪಿ 551 ರಲ್ಲಿ ಸ್ಥಾನಗಳನ್ನು ಗೆದ್ದಿದೆ. ಇನ್ನು, ಆರ್‌ಎಲ್‌ಪಿ 40 ಮತ್ತು ಬಿಎಸ್‌ಪಿ 11 ಸ್ಥಾನಗಳನ್ನು ಗೆದ್ದಿದೆ. ಸ್ವತಂತ್ರ ಅಭ್ಯರ್ಥಿಗಳು 290 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಎರಡು ಸ್ಥಾನಗಳ ಫಲಿತಾಂಶ ಪ್ರಕಟವಾಗಬೇಕಿದೆ.
ಜಿಲ್ಲಾ ಪರಿಷತ್‌ನ ಒಟ್ಟು 200 ಸ್ಥಾನಗಳಲ್ಲಿ ಕಾಂಗ್ರೆಸ್‌ 99 ಸ್ಥಾನಗಳು, ಬಿಜೆಪಿ 90 ಸ್ಥಾನಗಳನ್ನು ಗೆದ್ದಿವೆ. ಉಳಿದಂತೆ ಇತರ ಪಕ್ಷಗಳು 11 ಸ್ಥಾನಗಳನ್ನು ಗೆದ್ದಿವೆ. ಕಳೆದ ಚುನಾವಣೆಯಲ್ಲಿ 1,328 ಪಂಚಾಯಿತಿ ಸಮಿತಿ ಸ್ಥಾನಗಳ ಪೈಕಿ ಬಿಜೆಪಿ 585 ಸ್ಥಾನ ಗೆದ್ದಿತ್ತು. ಆದರೆ, ಈ ಬಾರಿ ಒಟ್ಟು ಸ್ಥಾನಗಳ ಸಂಖ್ಯೆ 1,564ಕ್ಕೆ ಹೆಚ್ಚಿದ್ದರೂ, ಬಿಜೆಪಿ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳನ್ನು ಗಳಿಸಿದೆ.
ಹಿಂದಿನ ಚುನಾವಣೆಯಲ್ಲಿ ಬಿಜೆಪಿ 100 ಜಿಲ್ಲಾ ಪಂಚಾಯತ್ ಸ್ಥಾನಗಳನ್ನು ಗೆದ್ದಿದ್ದರೆ, 90 ಸ್ಥಾನಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿತ್ತು.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement