ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ; ಕೇಂದ್ರ ಸಚಿವ ವೈಷ್ಣವ್‌ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ನವದೆಹಲಿ: ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜೊತೆ ಚರ್ಚಿಸಿದ್ದೇನೆ. ಕಲಬುರ್ಗಿಗೆ ರೈಲ್ವೆ ವಿಭಾಗ ನೀಡುವಂತೆ ಮನವಿ ಮಾಡಿದ್ದೇವೆ. ಹುಬ್ಬಳ್ಳಿ-ಅಂಕೋಲಾ ಮಾರ್ಗ ಬಗ್ಗೆಯೂ ಚರ್ಚಿಸಲಾಗಿದೆಎಂದು ದೆಹಲಿಯ ರೈಲ್ವೆ ಭವನದ ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, . ಬೆಂಗಳೂರು ಸಬ್ಅರ್ಬನ್ ಯೋಜನೆ ಆರಂಭಿಸಲು ಮನವಿ ಸಲ್ಲಿಸಿದ್ದೇನೆ ಇದಕ್ಕೆ ಕೇಂದ್ರ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಬ್ರಾಡ್​ಬ್ಯಾಂಡ್​ಗಳನ್ನು ಹೆಚ್ಚಿಸುವ ಕುರಿತು ಚರ್ಚಿಸಿದ್ದೇವೆ. ಅಲ್ಲದೇ ರಾಜ್ಯದಲ್ಲಿ ಒಟ್ಟು 4,300 ಕೋಟಿ ರೂ.ಗಳ ವೆಚ್ಚದಲ್ಲಿ ಬ್ರಾಡ್ ಬ್ಯಾಂಡ್ ಸಂಪರ್ಕ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಅಲ್ಲದೆ ಬಿ.ಎಲ್.ಸಂತೋಷ್ ಅವರ ಜೊತೆಗೆ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಚರ್ಚಿಸಿದರು. ನಬಾರ್ಡ್​ನಡಿ ಹಲವು ಯೋಜನೆಗಳಿವೆ. ಇವುಗಳನ್ನು ರಾಜ್ಯದಲ್ಲಿ ಅನುಷ್ಠಾನ ಮಾಡುವ ಬಗ್ಗೆ ಮನವಿ ಮಾಡಿದ್ದೇನೆ. ಯೋಜನೆ ಆರಂಭಿಸಲು ಸಚಿವರು ಸೂಚನೆ ನೀಡಿದ್ದಾರೆ. ಇದರಿಂದ ಕುಶಲಕರ್ಮಿಗಳು, ಮಹಿಳೆಯರಿಗೆ ಉದ್ಯೋಗ ದೊರೆಯಲಿದೆ. ಎಲ್ಲಾ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಜಾರಿಗೆ ಗುರಿ ಹೊಂದಿದ್ದೇವೆ. ಜಿಎಸ್​ಟಿ ಪರಿಹಾರ ಹಣ ಪಡೆದುಕೊಳ್ಳುವ ಬಗ್ಗೆಯೂ ಚರ್ಚಿಸಿದ್ದೇನೆ ಎಂದು ಅವರು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭೇಟಿಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಪ್ರಮುಖ ಸುದ್ದಿ :-   ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

ನಾಳೆ ಹೈ ಕಮಾಂಡ್​ ಭೇಟಿ

ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯನ್ನು ಈಗಾಗಲೇ ಬಸವರಾಜ ಬೊಮ್ಮಾಯಿ ಹೆಗಲಿಗೆ ಹೈ ಕಮಾಂಡ್​ ಹಾಕಿದೆ. ಸಂಪುಟ ವಿಸ್ತರಣೆ ಕಾರ್ಯ ನಡೆಯಬೇಕಿದೆ. ಇದೇ ಉದ್ದೇಶದಿಂದ ಸಂಪುಟ ವಿಸ್ತರಣೆಗೆ ಆದಷ್ಟು ಹಸಿರು ನಿಶಾನೆ ನೀಡುವಂತೆ ಹೈ ಕಮಾಂಡ್​ಗೆ ಮನವಿ ಮಾಡಲಿದ್ದು, ಈ ಕಾರಣಕ್ಕಾಗಿ ನಾಳೆ (ಬುಧವಾರ) ಹೈಕಮಾಂಡಿನ ಪ್ರಮುಖರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement