ಗಣೇಶ ಹಬ್ಬದ ನಿಮಿತ್ತ ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‌ ಓಡಾಟ

ಹುಬ್ಬಳ್ಳಿ: ಗಣೇಶನ ಹಬ್ಬದ ನಿಮಿತ್ತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ವಿಶೇಷ ಬಸ್‌ ಗಳನ್ನು ಓಡಿಸಲಿದೆ ಎಂದು ತಿಳಿಸಿದೆ.
ಈ ಕುರಿತು ಸಂಸ್ಥೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸೆಪ್ಟೆಂಬರ್‌ 10ರಂದು ಶುಕ್ರವಾರ ಗಣೇಶ ಚತುರ್ಥಿ ಹಬ್ಬವನ್ನು ಸರ್ಕಾರವು ಕೋವಿಡ್ ಮಾರ್ಗಸೂಚಿಗಳನ್ವಯ ಆಚರಿಸಲು ಅನುಮತಿ ನೀಡಿದೆ. ಹೀಗಾಗಿ ಸೆಪ್ಟೆಂಬರ್‌ 8 ಮತ್ತು 9ರಂದು ಬೆಂಗಳೂರು ಮತ್ತು ಇತರ ಪ್ರಮುಖ ಸ್ಥಳಗಳಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಗಣೇಶ ಚತುರ್ಥಿ ಸಲುವಾಗಿ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಅನುಕೂಲವಾಗಲು ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಿದೆ. ಹುಬ್ಬಳ್ಳಿ, ಧಾರವಾಡ, ಹಾವೇರಿ, ಚಿಕ್ಕೋಡಿ, ಗದಗ, ಬೆಳಗಾವಿ, ಬಾಗಲಕೋಟ, ಉತ್ತರ ಕನ್ನಡ, ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆಗಳು ಕಾರ್ಯಾಚರಣೆಗೊಳ್ಳಲಿವೆ ಎಂದು ತಿಳಿಸಿದೆ.
ಅದೇ ರೀತಿ ಗಣೇಶ ಚತುರ್ಥಿ ಹಬ್ಬ ಆಚರಿಸಿ ಮರಳಿ ಬೆಂಗಳೂರು ಹಾಗೂ ಇತರೇ ಸ್ಥಳಗಳಿಗೆ ಹೋಗುವ ಪ್ರಯಾಣಿಕರಿಗಾಗಿ ಸೆಪ್ಟಂಬರ್‌ 12 ಮತ್ತು 13ರಂದು ಎಲ್ಲ ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ ಬೆಂಗಳೂರು ಮತ್ತು ಪ್ರಮುಖ ಸ್ಥಳಗಳಿಗೆ ಹೆಚ್ಚುವರಿಯಾಗಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಗೊಳಿಸಲಾಗುತ್ತಿದೆ, ಈ ಕುರಿತು ಪ್ರಯಾಣಿಕರು ಮುಂಗಡ ಟಿಕೇಟ್‌ಗಳನ್ನು ksrtc.karnataka.gov.in ವೆಬ್ ಸೈಟ್‌ನಲ್ಲಿ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕೋವಿಡ್-19 ರ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಈ ವಿಶೇಷ ಹೆಚ್ಚುವರಿ ಸಾರಿಗೆಗಳ ಸೌಲಭ್ಯದ ಪ್ರಯೋಜನ ಪಡೆಯಬಹುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement