ರಾಜ್ಯದ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ..

ಬೆಂಗಳೂರು; ರಾಜ್ಯ ಶಿಕ್ಷಣ ಇಲಾಖೆ 2021-22ನೇ ಸಾಲಿನ‌ ಶೈಕ್ಷಣಿಕ ವರ್ಷದ ದಸರಾ ರಜೆ (Dussehra holiday) ಹಾಗೂ ಬೇಸಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಆಕ್ಟೋಬರ್ 10 ರಿಂದ 20ರ ವರೆಗೆ ಒಟ್ಟು 10 ದಿನಗಳ ಕಾಲ ರಾಜ್ಯದ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಈ ರಜೆ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆಗಳಿಗೆ ಅನ್ವಯಿಸಲಿದೆ. 2021-2022 ಶೈಕ್ಷಣಿಕ ವರ್ಷದ ಬೇಸಗಿಗೆ ರಜೆ ಶಾಲಾ ಮಕ್ಕಳಿಗೆ 2022ರ ಮೇ 1 ರಿಂದ ಮೇ 28 ರವರೆಗೆ ಇರಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೇಳಿದೆ ಎಂದು ನ್ಯೂಸ್‌ 18 ಕನ್ನಡ.ಕಾಮ್‌ ವರದಿ ಮಾಡಿದೆ.
ಒಟ್ಟು 66 ದಿನ ರಜೆ
ರಾಜ್ಯದ ಎಲ್ಲ ಶಾಲೆಗಳ 1ನೇ ತರಗತಿಯಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ ಆಕ್ಟೋಬರ್ 10 ರಿಂದ 20 ರವರೆಗೆ ದಸರಾ ರಜೆ ಇರಲಿದೆ. ಮುಂದಿನ ವರ್ಷ ಮೇ ತಿಂಗಳ 1ನೇ ತಾರೀಖಿನಿಂದ 28ನೇ ತಾರೀಖಿನವರೆಗೆ ಬೇಸಿಗೆ ರಜೆ ಇರಲಿದೆ. 2021-22ನೇ ಸಾಲಿನ‌ ಶೈಕ್ಷಣಿಕ ವರ್ಷದಲ್ಲಿ ಒಟ್ಟು ಮಕ್ಕಳಿಗೆ 66 ದಿನಗಳ ಕಾಲ ರಜೆಗಳನ್ನು ನೀಡಲಾಗಿದೆ. ಒಟ್ಟು 223 ದಿನಗಳು ಕಲಿಕಾ ದಿನ ಲಭ್ಯವಿದೆ.

ಪ್ರಮುಖ ಸುದ್ದಿ :-   ಸಿದ್ದರಾಮಯ್ಯಗೆ ಬ್ಲ್ಯಾಕ್‌ಮೇಲ್‌ ಮಾಡಲು ಸ್ಟಿಂಗ್ ಆಪರೇಷನ್.. ಇದ್ರಲ್ಲಿ ಕಾಂಗ್ರೆಸ್ಸಿನವರು ಇದ್ದಾರೆ: ಸಚಿವ ಯತೀಂದ್ರ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement