ಕಲಬುರಗಿ: ಯಾರು ನಮ್ಗೆ ಮೇಯರ್‌ ಸ್ಥಾನ ಕೊಡ್ತಾರೋ ಅವ್ರಿಗೆ ನಮ್ಮ ಬೆಂಬಲ: ಕಾಂಗ್ರೆಸ್‌-ಬಿಜೆಪಿಗೆ ಜೆಡಿಎಸ್‌ ಪಾಲಿಕೆ ಸದಸ್ಯರ ಸಖತ್‌ ಆಫರ್‌…!

ಬೆಂಗಳೂರು: ಯಾರು ನಮಗೆ ಮೇಯರ್ ಸ್ಥಾನ ಕೊಡುತ್ತಾರೋ ಅವರಿಗೆ ನಮ್ಮ ಬೆಂಬಲಎಂದು ಕಲಬುರಗಿ ಮಹಾನಗರ ಪಾಲಿಕೆಯ ಜೆಡಿಎಸ್‌ ಸದಸ್ಯರುಷರತ್ತು ಮುಂದಿಟ್ಟಿದ್ದಾರೆ.
ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷ ಯಾವುದೇ ಅಗಲಿ ಜೆಡಿಎಸ್​ಗೆ ಕಲ್ಬುಗಿ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕೊಟ್ಟರೆ ಅವರಿಗೆ ನಮ್ಮ ಬೆಂಬಲ ನೀಡುತ್ತೇವೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಸದಸ್ಯರು ಹೇಳಿದ್ದಾರೆ.
ಪಾಲಿಕೆ ಬೆಂಬಲ ವಿಚಾರವಾಗಿ ಕಲ್ಬುರ್ಗಿ ಪಾಲಿಕೆ ಜೆಡಿಎಸ್ ಸದಸ್ಯರು ಇಂದು (ಬುಧವಾರ) ಬೆಳಗ್ಗೆ ಎಚ್.ಡಿ. ಕುಮಾರಸ್ವಾಮಿ ಹಾಗೂ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಾಲಿಕೆ ಸದಸ್ಯರು,ನಾವು ನಮ್ಮ ನಿಲುವು ಸ್ಪಷ್ಟಪಡಿಸಿದ್ದೇವೆ ಈ ಕುರಿತು ಈಗ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತೀರ್ಮಾನ ಮಾಡಬೇಕು. ಕಲ್ಬುರ್ಗಿಯ ನಾಲ್ವರು ಸದಸ್ಯರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇ ಗೌಡ ಅವರ ಜೊತೆ ಚರ್ಚೆ ಮಾಡಿದ್ದೇವೆ. ಮೈತ್ರಿಗೆ ಜೆಡಿಎಸ್ ಸಿದ್ಧವಿದೆ. ಆದರೆ ಮೊದಲ ಅವಧಿಗೆ ಅವಧಿಗೆ ನಮಗೆ ಮೇಯರ್ ಸ್ಥಾನ ಕೇಳಲು ನಿರ್ಧರಿಸಿದ್ದೇವೆ. ನಮ್ಮ ಬೇಡಿಕೆಯನ್ನು ನಾವು ಮಂಡಿಸಿದ್ದೇವೆ. ಈ ಬೇಡಿಕೆಗೆ ಯಾರು ಸಮ್ಮತಿ ಸೂಚಿಸುತ್ತಾರೋ ಅವರಿಗೆ ನಮ್ಮ ಬೆಂಬಲ ಎಂದು ಜೆಡಿಎಸ್ ಕಲಬುರ್ಗಿ ಮುಖಂಡ ನಾಸೀರ್ ಹುಸೇನ್ ಹೇಳಿದರು.
ಜೆಡಿಎಸ್ ಬೆಂಬಲ ಅನಿವಾರ್ಯ ಯಾಕೆಂದರೆ..!
ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ 55 ವಾರ್ಡ್​ಗಳಿವೆ. ಮೊನ್ನೆ ಪ್ರಕಟವಾದ ಫಲಿತಾಂಶದಲ್ಲಿ ಕಾಂಗ್ರೆಸ್ 27, ಬಿಜೆಪಿ 23, ಜೆಡಿಎಸ್ 4 ಕ್ಷೇತ್ರಗಳಲ್ಲಿ ಗೆದ್ದಿವೆ. ಒಬ್ಬ ಪಕ್ಷೇತರ ಸದಸ್ಯರಿದ್ದಾರೆ. ಪಾಲಿಕೆ ಅಧ್ಯಕ್ಷರ ಅಥವಾ ಮೇಯರ್ ಚುನಾವಣೆಯಲ್ಲಿ ಕಲಬುರ್ಗಿ ಲೋಕಸಭಾ ಕ್ಷೇತ್ರದ ಸಂಸದ, ಶಾಸಕ ಹಾಗೂ ವಿಧಾನಸಭಾ ಸದಸ್ಯರಿಗೆ ಮತ ಹಾಕುವ ಹಕ್ಕು ಇದೆ. ಇವರೆಲ್ಲರನ್ನೂ ಸೇರಿ ಪಾಲಿಕೆಯಲ್ಲಿ ಬಹುಮತಕ್ಕೆ 32 ನಂಬರ್ ಅಗತ್ಯ ಇದೆ. ಬಿಜೆಪಿಯಲ್ಲಿ ಪಾಲಿಕೆ ಸದಸ್ಯರ ಸಂಖ್ಯೆ 23, ಒಬ್ಬ ಸಂಸದ, ಇಬ್ಬರು ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರೊಂದಿಗೆ ಬಿಜೆಪಿಯ ಬಲ 30 ಆಗುತ್ತದೆ. ಮ್ಯಾಜಿಕ್ ನಂಬರ್ ಆದ 32ಕ್ಕೆ ಇನ್ನೂ ಇಬ್ಬರು ಸದಸ್ಯರ ಬೆಂಬಲ ಅಗತ್ಯ ಇದೆ. ಜೆಡಿಎಸ್​ನ ನಾಲ್ವರು ಸದಸ್ಯರಲ್ಲಿ ಇಬ್ಬರ ಬೆಂಬಲ ಸಿಕ್ಕರೂ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಬಲ್ಲುದು.
ಕಾಂಗ್ರೆಸ್ ಪಕ್ಷ ಕಲಬುರ್ಗಿ ಪಾಲಿಕೆಯಲ್ಲಿ 27 ಸದಸ್ಯರನ್ನ ಹೊಂದಿದೆ. ಒಬ್ಬ ಶಾಸಕ ಹಾಗೂ ಒಬ್ಬ ರಾಜ್ಯಸಭಾ ಸದಸ್ಯರನ್ನ ಸೇರಿಸಿದರೆ ಅದರ ಸಂಖ್ಯಾಬಲ 29ಕ್ಕೆ ಏರುತ್ತದೆ. ಮ್ಯಾಜಿಕ್ ನಂಬರ್​ಗೆ ಇನ್ನೂ 3 ಸದಸ್ಯರ ಬೆಂಬಲ ಅಗತ್ಯ ಇದೆ. ಅಧಿಕಾರ ಹಿಡಿಯಲು ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಸದಸ್ಯರ ಬೆಂಬಲ ಅತಿ ಮುಖ್ಯ. ಯಾರೇ ಆದರೂ ಜೆಡಿಎಸ್‌ ಬಲವಿಲ್ಲದೆ ಅಧಿಕಾರ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಜೆಡಿಎಸ್‌ ಮೇಯರ್‌ ಪಟ್ಟದ ಬೇಡಿಕೆಯ ದಾಳ ಉರುಳಿಸಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement