ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕು: ಈ ಜಿಲ್ಲೆಗಳಲ್ಲಿ ಸೆ.12ರ ವರೆಗೂ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಸೆಪ್ಟೆಂಬರ್​ ತಿಂಗಳಿನಲ್ಲಿ ಮುಂಗಾರು (Monsoon) ಬಿರುಸು ಪಡೆದುಕೊಂಡಿದೆ. ಈ ತಿಂಗಳ ಆರಂಭದಿಂದಲೂ ರಾಜ್ಯದೆಲ್ಲೆಡೆ ಮಳೆ ಸುರಿಯುತ್ತಿದ್ದು, ಇಂದಿನಿಂದ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.
ರಾಜ್ಯದೆಲ್ಲೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಸೆಪ್ಟೆಂಬರ್ 12ರ ವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಇಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ (Yellow Alert) ಘೋಷಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಇಂದು (ಗುರುವಾರ) ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಉಡುಪಿ, ಕುಂದಾಪುರ, ಬೈಂದೂರು, ಹುಲಿಕಲ್, ಹಾಲಾಡಿ, ಕಾರ್ಕಳ, ಮಣಿಪಾಲ ಮೊದಲಾದ ಕಡೆ ಮಳೆ ಸುರಿಯುತ್ತಿದೆ.
ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆ ಸುರಿದಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಚದುರಿದಂತೆ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು. ಸೆಪ್ಟೆಂಬರ್ 12ರ ವರೆಗೂ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ.

ಪ್ರಮುಖ ಸುದ್ದಿ :-   ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement