ವಿಶ್ವವಿಖ್ಯಾತ ಹಂಪಿ ವೀಕ್ಷಣೆಗೆ ಈಗ ಮುಕ್ತ ಅವಕಾಶ

ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಲಾಗಿದ್ದು, ಈ ಕುರಿತು ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ಹೆಚ್ಚಳದ ಭೀತಿ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್‌ 14ರಿಂದ ಹೇರಿದ್ದ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಈ ಹಿಂದಿನ ಆದೇಶದಂತೆ ಪ್ರತಿ ಶನಿವಾರ, ಭಾನುವಾರ ಹಾಗೂ ಸೋಮವಾರ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಮುಖವಾಗಿತ್ತು. ಆದರೆ ಈಗ ಸ್ಮಾರಕಗಳ ವೀಕ್ಷಣೆಗೆ ಹೇರಲಾಗಿದ್ದ ನಿರ್ಬಂಧ ತೆರವು ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಸ್ಮಾರಕಗಳು ಹಾಗೂ ದೇವಸ್ಥಾನಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿಕೊಡಲಾಗಿದೆ
ಕೊರೊನಾ ಸಾಂಕ್ರಾಮಿಕದ ಕಾರಣದಿಂದ ರಾಜ್ಯಾದ್ಯಂತ ಎರಡು ವರ್ಷಗಳಿಂದ ಪ್ರವಾಸೋದ್ಯಮ ನೆಲ ಕಚ್ವಿದೆ. ಸದ್ಯ ಹಂಪಿ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಮತ್ತೆ ಚೇತರಿಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement