ದಾವಣಗೆರೆ: ಬೈಕಿಗೆ ಬೊಲೆರೋ ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊನ್ನೇಭಾಗಿಯಲ್ಲಿ ನಡೆದಿದೆ.
ಮೃತರನ್ನು ಅಜ್ಜಯ್ಯ (18) ಮಂಜುನಾಥ್ (17) ಹಾಗೂ ದೇವರಾಜ್ (17) ಎಂದು ಗುರುತಿಸಲಾಗಿದೆ. ಮೃತ ಯುವಕರು ಚನ್ನಗಿರಿ ತಾಲೂಕು ಮಲ್ಲೇಶಪುರ ನಿವಾಸಿಗಳು.ಈ ಮೂವರು ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆದು ವಾಸ್ಸಾಗುತ್ತಿದ್ದರು ಎನ್ನಲಾಗಿದೆ. ಇವರೆಲ್ಲ ಒಂದೇ ಬೈಕ್ ನಲ್ಲಿ ಹೊರಟಿದ್ದರು. ಈ ವೇಳೆ ಬೈಕಿಗೆ ಬೊಲೆರೋ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬನನ್ನು ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರಸ್ತೆ ಮಧ್ಯೆ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ