ಮನೆ ಕನಸು ಕಂಡವರಿಗೆ ಸರ್ಕಾರದ ಗುಡ್ ನ್ಯೂಸ್ :4 ಲಕ್ಷ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಶೀಘ್ರ ಆರಂಭ

ಬೆಂಗಳೂರು: ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರ ಸ್ವಂತ ಮನೆ ಹೊಂದುವ ಕನಸಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ ವಸತಿ ಯೋಜನೆಯಡಿ 4 ಲಕ್ಷ ಹೊಸ ಮನೆಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
2021-22ರ ಸಾಲಿನ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ)ಯಡಿ 4 ಲಕ್ಷ ಮನೆಗಳಿಗಾಗಿ ರೂ. 2000 ಕೋಟಿ (ಶೇ.40ರಷ್ಟ ರಾಜ್ಯದ ಪಾಲು) ಮತ್ತು ರಾಜ್ಯ ವಸತಿ ಯೋಜನೆಯಡಿ 1 ಲಕ್ಷ ಮನೆಗಳಿಗಾಗಿ 1500 ಕೋಟಿ ರೂ.ಗಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.
ಕೇಂದ್ರ ಸರಕಾರದಿಂದ 4 ಲಕ್ಷ ಮನೆಗಳ ಹೊಸ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ನೀಡಿದಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿಯಲ್ಲಿ ಅನುಷ್ಠಾನಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು. ಈ ಸಂಬಂಧ ಸೆಪ್ಟೆಂಬರ್ 9ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿತ್ತು.
ಈಗ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಕೇಂದ್ರ ಸರ್ಕಾರದಿಂದ 4 ಲಕ್ಷ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement