ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಇಂದು ಮುಂಜಾನೆ 8.18ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಊರಿನವರು ಹೇಳಿದ್ದು, ಒಂದೇ ವಾರದಲ್ಲಿ ಎರಡನೇ ಬಾರಿ ಈ ಅನುಭವ ಆಗಿರುವುದು ಭಯಕ್ಕೆ ಕಾರಣವಾಗಿದೆ.
ಸೆಪ್ಟೆಂಬರ್ 4ರಂದು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪವಾಗಿತ್ತು. ಅಂದು ರಿಕ್ಟರ್ ಮಾಪನದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿತ್ತು. ಇದೀಗ ಸರಿಯಾಗಿ ಒಂದು ವಾರದ ಅಂತರದಲ್ಲಿ ಮತ್ತೆ ಭೂಮಿ ನಡುಗಿದ ಅನುಭವ ಆಗಿದೆ. ಒಂದು ವಾರದ ಹಿಂದೆ ಭೂಕಂಪ ಆಗಿ
ವ ಬಗ್ಗೆ ಹಾಗೂ ಅದರ ತೀವ್ರತೆ ಬಗ್ಗೆ ಜಿಲ್ಲಾಡಳಿತ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದೀಗ ಇಂದು ಮತ್ತೆ ಭೂಮಿ ನಡಗಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.,
ವಿಜಯಪುರ ಜಿಲ್ಲೆಯಾದ್ಯಂತ ಕಳೆದ ವಾರ 11.47ಕ್ಕೆ ಭೂಮಿ ಕಂಪಿಸಿದ ಅನುಭವವಾಗಿತ್ತು ರಾತ್ರಿ ಬಾಗಲಕೋಟೆ, ಜಮಖಂಡಿ ತಾಲೂಕಿನಲ್ಲಿ ಕಂಪನದ ಅನುಭವವಾಗಿದ್ದು, ಈ ಬಗ್ಗೆ ಬಾಗಲಕೋಟೆ ಜಿಲ್ಲಾಡಳಿತ ಖಚಿತಪಡಿಸಿದೆ. ಅಂಕಲಗಿ ಗ್ರಾಮದಲ್ಲಿ ಭೂಕಂಪನದ ಅನುಭವವಾದ ಹಿನ್ನೆಲೆ ಕೊಟ್ಟಿಗೆಯಲ್ಲಿ ದನಕರುಗಳು ಎದ್ದು ನಿಂತಿರುವುದು ತಿಳಿದುಬಂದಿದೆ. ಕೆ.ಎಲ್.ಬಿಲ್.ಕೇರಿ ಎಂಬುವರ ಕೊಟ್ಟಿಗೆಯಲ್ಲಿದ್ದ ಹಸುಗಳು ಭೂಕಂಪನ ಅನುಭವಕ್ಕೆ ದಿಢೀರನೆ ಎದ್ದು ನಿಂತಿದ್ದವು ಎಂಬ ಮಾಹಿತಿ ಲಭ್ಯವಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ