ಮಲಯಾಳಂನ ಖ್ಯಾತ ಕಿರುತೆರೆ ನಟ ರಮೇಶ ವಲಿಯಾಸಾಳ ನಿಗೂಢ ಸಾವು

ತಿರುವನಂತಪುರಂ : ಮಳಯಾಳಂನ ಖ್ಯಾತ ಕಿರುತೆರೆ ನಟ ರಮೇಶ ವಲಿಯಾಸಾಳ ನಿಗೂಢವಾಗಿ ಸಾವಿಗೀಡಾಗಿದ್ದಾರೆ, ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನಟನ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೇರಳದ ಜನಪ್ರಿಯ ಕಿರುತೆರೆ ನಟನಾಗಿ ಗುರುತಿಸಿಕೊಂಡಿರುವ 54 ವರ್ಷದ ರಮೇಶ್‌ ವಲಿಯಾಸಾಳ ಧಾರಾವಾಹಿ ಮತ್ತು ಸಿನಿಮಾ ನಟರಾಗಿದ್ದ ಪ್ರಖ್ಯಾತಿಯನ್ನು ಗಳಿಸಿಕೊಂಡಿದ್ದರು. ಆದರೆ ಇಂದು ಅವರ ಶವ ತಿರುವನಂತಪುರದ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೆಲವು ವರ್ಷಗಳಿಂದ ರಮೇಶ್‌ ವಲಿಯಾಸಾಳ ಅವರು ತನ್ನ ಎರಡನೇ ಪತ್ನಿ ಮತ್ತು ಮಗನೊಂದಿಗೆ ವಾಲಿಯಾಶಾಲಾದಲ್ಲಿ ವಾಸಿಸುತ್ತಿದ್ದರು. ಸಾವಿಗೀಡಾಗುವ ಎರಡು ದಿನಗಳ ಮೊದಲು, ರಮೇಶ್ ಹೊಸ ಪ್ರಾಜೆಕ್ಟ್ ಗಾಗಿ ಲೊಕೇಶನ್ ನಿಂದ ಶೂಟಿಂಗ್ ಮುಗಿಸಿ ಮರಳಿದ್ದರು ಎನ್ನಲಾಗಿದೆ.
ಪೌರ್ಣಮಿತಿಂಗಲ್’ ಧಾರಾವಾಹಿಯಲ್ಲಿ ಅವರು ಕೊನೆಯದಾಗಿ ನಟಿಸಿದ್ದಾರೆ. ಸುಮಾರು 22 ವರ್ಷಗಳಿಂದಲೂ ಮಲಯಾಲಂ ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ಅವರು ಭಾರೀ ಜನಪ್ರಿಯತೆ ಪಡೆದಿದ್ದರು. ಕೊರೊನಾ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಇದೇ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಇದೀಗ ರಮೇಶ್‌ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಪೊಲೀಸರ ತನಿಖೆಯಿಂದಷ್ಟೆ ಸತ್ಯಾಂಶ ಹೊರಬರಬೇಕಾಗಿದೆ.

ಪ್ರಮುಖ ಸುದ್ದಿ :-   ವೀಡಿಯೋ..| ಎರಡೂ ಕೈತೋಳುಗಳಿಲ್ಲದೆ ಡ್ರೈವಿಂಗ್‌ ಲೈಸೆನ್ಸ್‌ ಪಡೆದ ಏಷ್ಯಾದ ಮೊದಲ ಮಹಿಳೆ ಇವರು : ಕೇರಳದ ಯುವತಿಯ ಕಾರ್‌ ಚಾಲನೆಗೆ ಬೆರಗಾಗ್ತೀರಾ..!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement