ಕಲಬುರ್ಗಿ ಪಾಲಿಕೆಯಲ್ಲಿ ಮೈತ್ರಿ ವಿಚಾರ; ಜೆಡಿಎಸ್‌ ನಿರ್ಧಾರ ನಾಳೆ ಪ್ರಕಟ..?

ಬೆಂಗಳೂರು: ಕಲಬುರ್ಗಿ ಪಾಲಿಕೆ ಚುನಾವಣೆ ಮೈತ್ರಿ ವಿಚಾರ ಇನ್ನೂಬಗೆಹರಿದಿಲ್ಲ. ಜೆಡಿಎಸ್ ನಾಳೆ (ಸೋಮವಾರ) ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ನಾಳೆ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ದಳಪತಿಗಳು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲಿಯವರೆಗೂ ಕಲಬುರ್ಗಿ ಕಾರ್ಪೊರೇಟರ್ ಗಳು ಬೆಂಗಳೂರು ರೆಸಾರ್ಟ್ ನಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ರಾಜಕೀಯ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ ಜೊತೆ ಮೈತ್ರಿಗೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಒಲವು ತೋರಿದ್ದಾರೆ ಎನ್ನಲಾಗಿದ್ದು ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೈತ್ರಿ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ದೇವೇಗೌಡರು ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಬಗ್ಗೆ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ನಾಳೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಎಸ್ಯಾವ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಬೇಕು ಎಂಬುದನ್ನು ನಿರ್ಧರಿಸಲಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement