ರಾಜ್ಯದಲ್ಲಿ ಭಾನುವಾರ 803 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು (ಭಾನುವಾರ) ಹೊಸದಾಗಿ 803 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 29,61,735 ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ 17 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಇದುವರೆಗೆ ರಜ್ಯದಲ್ಲಿ 37,504 ಜನ ಸೋಂಕಿತರು ಮೃತಪಟ್ಟಿದ್ದಾರೆ . ರಾಜ್ಯದಲ್ಲಿ ಇಂದು 802 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,07,548 ಜನ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ 16,656 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.80 ರಷ್ಟು ಇದೆ. ಬೆಂಗಳೂರಿನಲ್ಲಿ ಇಂದು ಹೊಸದಾಗಿ 255 ಜನರಿಗೆ ಸೋಂಕು ತಗುಲಿದ್ದು 6 ಮಂದಿ ಮೃತಪಟ್ಟಿದ್ದಾರೆ. 107 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7321 ಸಕ್ರಿಯ ಪ್ರಕರಣಗಳು ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ನಿಮ್ಮ ಕಾಮೆಂಟ್ ಬರೆಯಿರಿ

advertisement