ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ

ಮಂಗಳೂರು: ರಾಜ್ಯಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದಿಂದ ಇಂದು (ಸೋಮವಾರ) ವಿಧಿವಶರಾಗಿದ್ದಾರೆ.
ಕಳೆದ ಕೆಲ ತಿಂಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಕರ್ ಫರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಆಸ್ಕರ್ ಫರ್ನಾಂಡಿಸ್ ಜುಲೈ 18ರಂದು ಯೋಗ ಮಾಡುತ್ತಿದ್ದಾಗ ಮನೆಯಲ್ಲಿಯೇ ಜಾರಿ ಬಿದ್ದಿದ್ದರು. ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತೆರಳಿದಾಗ ತಲೆಗೆ ಪೆಟ್ಟಾಗಿರುವುದು ತಿಳಿದುಬಂದಿತ್ತು.
1941ರ ಮಾರ್ಚ್ 27ರಂದು ಲಿಯೋನಿಸ್ಸಾ ಫರ್ನಾಂಡಿಸ್ ದಂಪತಿ ಪುತ್ರನಾಗಿ ಉಡುಪಿಯಲ್ಲಿ ಆಸ್ಕರ್ ಫರ್ನಾಂಡಿಸ್ ಜನಿಸಿದ್ದರು. ತಂದೆ ಬ್ರಿಟಿಷರ ವಿರುದ್ಧ ಧ್ವನಿಯೆತ್ತಿದ ಹೋರಾಟಗಾರ. ತಾಯಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಮಹಿಳಾ ಬೆಂಚ್ ಮ್ಯಾಜಿಸ್ಟ್ರೇಟ್ ಆಗಿದ್ದರು. 1972ರಲ್ಲಿ ಉಡುಪಿ ಮುನ್ಸಿಪಾಲಿಟಿಯ ಸದಸ್ಯರಾಗಿ ರಾಜಕೀಯ ಪ್ರವೇಶಿಸಿದ್ದ ಆಸ್ಕರ್ ಫರ್ನಾಂಡಿಸ್,1980ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಮೊದಲಬಾರಿ ಸಂಸತ್ ಪ್ರವೇಶಿಸಿದ್ದರು. ಆಸ್ಕರ್ ಫರ್ನಾಂಡಿಸ್ 5 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕೇಂದ್ರ ಸಾರಿಗೆ ಹಾಗೂ ಕಾರ್ಮಿಕ ಸಚಿವರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1987ರಿಂದ 1992ರವರೆಗೆ ಆಸ್ಕರ್ ಫೆರ್ನಾಂಡಿಸ್ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಮಂಗಳೂರು ವಿವಿ  ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.
ಆಸ್ಕರ್ ಫರ್ನಾಂಡಿಸ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಅತ್ಯಾಪ್ತರಾಗಿದ್ದ ಆಸ್ಕರ್ ಫರ್ನಾಂಡಿಸ್‌ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲಾ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ದೇವರಾಜೇಗೌಡಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಬೇರೆ ಯಾರಿಗೂ ಕೊಟ್ಟಿಲ್ಲ : ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ ಹೇಳಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement