ತಿರುವನಂತಪುರ: ಹಿಂದೂ ಮಹಾಸಭಾ ನಾಯಕ ಸಾವರ್ಕರ್ ಮತ್ತು ಆರ್‌ಎಸ್‌ಎಸ್ ನಾಯಕ ಮಾಧವ ಗೋಳ್ವಲ್ಕರ್ ಅವರ ಪುಸ್ತಕವನ್ನು ಸ್ನಾತಕೋತ್ತರ ಪದವಿಯ ಆಡಳಿತ ಮತ್ತು ರಾಜಕೀಯ ಕೋರ್ಸ್ ನಲ್ಲಿ ಸೇರಿಸುವ ಕಣ್ಣೂರು ವಿಶ್ವವಿದ್ಯಾಲಯದ ನಿರ್ಧಾರವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಬೆಂಬಲಿಸಿದ್ದಾರೆ.
ನಮ್ಮ ಸಮಾಜದಲ್ಲಿ ಬೌದ್ಧಿಕ ಸ್ವಾತಂತ್ರ್ಯ ಅತ್ಯಂತ ಮಹತ್ವ ಪಡೆದಿದೆ. ಪಕ್ಷ ರಾಜಕೀಯ ಬಲಿ ನೀಡಲು ಬೌದ್ಧಿಕ ಸ್ವಾತಂತ್ರ್ಯ ತ್ಯಾಗ ಮಾಡಬಾರದು ಎಂದು ಶಶಿ ತರೂರ್ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಗೋಳ್ವಲ್ಕರ್ ಮತ್ತು ಸಾರ್ವಕರ್ ಅವರ ಬಗ್ಗೆ ತಿಳಿದುಕೊಳ್ಳದೆ ಇದ್ದರೆ ಯಾವ ಅಂಶಗಳ ಆಧಾರದ ಮೇಲೆ ನಾವು ಅವರನ್ನು ವಿರೋಧಿಸಬೇಕು? ಕಣ್ಣೂರು ವಿಶ್ವವಿದ್ಯಾಲಯವು ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್ ಅವರ ವಿಷಯಗಳ ಬಗ್ಗೆಯೂ ಬೋಧಿಸುತ್ತದೆ ಎಂದು ಅವರು ಹೇಳಿದ್ದಾರೆ.
ಕಣ್ಣೂರು ವಿಶ್ವವಿದ್ಯಾಲಯದ ನಿರ್ಧಾರಕ್ಕೆ ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಅಲ್ಲದೆ ಇದನ್ನು ವಿಶ್ವವಿದ್ಯಾಲಯದ ಕೇಸರೀಕರಣ ಎಂದು ಟೀಕಿಸಿವೆ. ಈ ಟೀಕೆಗಳ ನಡುವೆ ವಿಶ್ವವಿದ್ಯಾಲಯದ ನಿರ್ಧಾರ ಬೆಂಬಲಿಸಿ ಕಾಂಗ್ರೆಸ್ ನಾಯಕ ಶಶಿ ತರೂರ ಹೇಳಿಕೆ ಬಂದಿದೆ.
ನಿಮ್ಮ ಕಾಮೆಂಟ್ ಬರೆಯಿರಿ