ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ

ಅಹಮದಾಬಾದ್: ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಇಂದು (ಸೋಮವಾರ) ಪ್ರಮಾಣವಚನ ಸ್ವೀಕರಿಸಿದರು.
ಭೂಪೇಂದ್ರ ಪಟೇಲ್ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗಿತ್ತು.
ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಪಕ್ಷದ ವೀಕ್ಷಕರಾಗಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ವಿಜಯ್ ರೂಪಾನಿ ಶನಿವಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಭುಪೇನ್‌ ಪಟೇಲ್ ಘಾಟ್ ಲೋಡಿಯಾ ಕ್ಷೇತ್ರದ ಶಾಸಕರಾಗಿದ್ದಾರೆ. ಅವರಿಗಿಂತ ಮೊದಲು ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಪ್ರತಿನಿಧಿಸುತ್ತಿದ್ದರು.
ಪಟೇಲ್‌ ಅವರು ಸಮಾಜದ ತಳಮಟ್ಟದಿಂದಲೇ ಕೆಲಸ ಮಾಡಿದ್ದಾರೆ. ಸಹಕಾರಿ ಕ್ಷೇತ್ರದ ಮೇಲೆ ಜ್ಞಾನವಿದ್ದು, ಪಕ್ಷದ ಕಾರ್ಯಕರ್ತರೊಂದಿಗೆ ಕೆಲಸ ಮಾಡಿದ್ದಾರೆ. ಅವರ ಈ ಆಡಳಿತಾತ್ಮಕ ಸಾಮರ್ಥ್ಯಗಳೇ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲು ಪ್ರಮುಖ ಅಂಶಗಳಾಗಿವೆ ಎಂದು ಬಿಜೆಪಿ ಅಧ್ಯಕ್ಷ ಸಿ. ಆರ್‌. ಪಾಟೀಲ ಹೇಳಿದ್ದಾರೆ.
57 ವರ್ಷದ ಭೂಪೇಂದ್ರ ಪಟೇಲ್‌ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಅವರ ಅತ್ಯಾಪ್ತರರಾಗಿದ್ದು, ಅಹಮದಾಬಾದ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಅಮದ್ವಾಡ ಮುನ್ಸಿಪಲ್ ಕಾರ್ಪೋರೇಶನ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಭೂಪೇಂದ್ರ ಪಟೇಲ್‌ ಹೆಸರನ್ನು ವಿಜಯ್ ರೂಪಾನಿಯವರೇ ಸೂಚಿಸಿದ್ದಾರೆ ಎನ್ನಲಾಗಿದೆ. ಗುಜರಾತ್ನ ಘಾಟ್ಲೋಡಿಯಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಭೂಪೇಂದ್ರ ಪಟೇಲ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿಕಾಂತ್ ಪಟೇಲ್ ವಿರುದ್ಧ 1,17,000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಈ ಕ್ಷೇತ್ರದಲ್ಲಿ ಭೂಪೇಂದ್ರ ಪಟೇಲ್‌ ಅವರಿಗೂ ಮೊದಲು ಆನಂದಿಬೆನ್ ಪಟೇಲ್ ಅಭ್ಯರ್ಥಿಯಾಗಿದ್ದರು.
ಅವರು ಪಟೇಲ್ ಅಥವಾ ಪಾಟಿದಾರ್ ಸಮುದಾಯಕ್ಕೆ ಸೇರಿದವರಾಗಿದ್ದು, ಗುಜರಾತಿನ ಬಲಾಢ್ಯ ಸಮುದಾಯವಾಗಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಪಟೇಲ್‌ ಸಮುದಾಯದವರನ್ನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಮುಂದಿನ ವರ್ಷ ಚುನಾವಣೆ ಇರುವುದರಿಂದ ಭುಪೇಂದ್ರ ಪಟೇಲ್‌ ಅವರ ಮೇಲೆ ಗುರುತರ ಜವಾಬ್ದಾರಿ ಇದೆ.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement