ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ :ನಾಲ್ವರು ಆರೋಪಿಗಳು ವಶಕ್ಕೆ

ಯಾದಗಿ: ಶಹಾಪುರ ನಗರ ಹೊರವಲಯದಲ್ಲಿ ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಹಲ್ಲೆ ನಡೆಸಿರುವ ಅಮಾನೀಯ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ 8-9 ತಿಂಗಳ ಹಿಂದೆ ಶಹಾಪುರ ನಗರ ಹೊರವಲಯದಲ್ಲಿ ನಡೆದಿದೆ ಎನ್ನಲಾದ ಈ ಕೃತ್ಯದ ವಿಡಿಯೊ ತುಣುಕೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್‌ ಆದ ನಂತರ ಈ ಬಗ್ಗೆ ಶಹಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಮೂರು ತಂಡಗಳನ್ನು ರಚಿಸಿರುವುದಾಗಿ ತಿಳಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ.ವೇದಮೂರ್ತಿ, ಶಂಕಿತ ನಾಲ್ವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.
ವೈರಲ್ ವಿಡಿಯೊದಲ್ಲಿ ಯುವಕರು ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಥಳಿಸುತ್ತಿದ್ದಾರೆ. ‘ಕಾಲಿಗೆ ಬೀಳುತ್ತೇನೆ ಹೊಡೆಯಬೇಡಿ’ ಎಂದು ಮಹಿಳೆ ಅಂಗಲಾಚುತ್ತಿದ್ದಾರೆ. ಈ ಘಟನೆ 8-9 ತಿಂಗಳ ಹಿಂದೆ ನಡೆದಿದೆ ಎನ್ನಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement