ಧಾರವಾಡ: ಜಿಲ್ಲೆಯಲ್ಲಿ ಶ್ರೀ ಗಣೇಶೋತ್ಸವವನ್ನು ಗರಿಷ್ಠ 11 ದಿನಗಳ ವರೆಗೆ ಕೋವಿಡ್ ಮಾರ್ಗಸೂಚಿಗಳೊಂದಿಗೆ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾದಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಸೆ.5 ರಂದು ಹೊರಡಿಸಿದ್ದ ಮಾರ್ಗಸೂಚಿಗಳಲ್ಲಿ ಗರಿಷ್ಠ 5 ದಿನ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗಿತ್ತು. ಈಗ ಪರಿಷ್ಕೃತ ಆದೇಶದಲ್ಲಿ ಈ ನಿಯಮ ಸಡಿಲಿಸಿ ಜಿಲ್ಲೆಯಲ್ಲಿ ಈ ಹಿಂದೆ ಸಾಂಪ್ರದಾಯಿಕವಾಗಿ 11 ದಿನಗಳ ವರೆಗೆ ಗಣೇಶೋತ್ಸವ ಆಚರಿಸುತ್ತಿದ್ದವರಿಗೆ ಈ ಬಾರಿಯೂ ಗರಿಷ್ಠ 11 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗಿದೆ.
ಗಣೇಶೋತ್ಸವ ಆಚರಣೆ ವೇಳೆ ಕೋವಿಡ್-19ರ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ