ಕರ್ನಾಟಕದಲ್ಲಿ ಮಂಗಳವಾರ 600ಕ್ಕಿಂತ ಕಡಿಮೆಗೆ ಬಂದ ಕೋವಿಡ್‌ ದೈನಂದಿನ ಪ್ರಕರಣ ..!

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆಯಾಗಿದೆ.
ಇಂದು (ಮಂಗಳವಾರ) ರಾಜ್ಯದಲ್ಲಿ 559 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 29,62,967 ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ 12 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಇದುವರೆಗೆ ಸೋಂಕಿನಿಂದ 37,529 ಜನ ಮೃತಪಟ್ಟಿದ್ದಾರೆ. ಇಂದು 1034 ಜನ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 29,09,656 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,754 ಇದೆ. ಪಾಸಿಟಿವಿಟಿ ರೇಟ್ ಶೇ.0.52ಕ್ಕೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಕೂಡ ಇಂದು 231 ಸೋಂಕು ದಾಖಲಾಗಿದ್ದು, ಬೆಂಗಳೂರಿನಲ್ಲಿ 302 ಮಂದಿ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾಗೆ 4 ಜನ ಮೃತಪಟ್ಟಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 231, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 8, ಚಿತ್ರದುರ್ಗ 2, ದಕ್ಷಿಣ ಕನ್ನಡ 87, ದಾವಣಗೆರೆ 9, ಧಾರವಾಡ 1, ಗದಗ 0, ಹಾಸನ 10, ಹಾವೇರಿ 1, ಕಲಬುರಗಿ 3, ಕೊಡಗು 23, ಕೋಲಾರ 9, ಕೊಪ್ಪಳ 1, ಮಂಡ್ಯ 10, ಮೈಸೂರು 28, ರಾಯಚೂರು 1, ರಾಮನಗರ 0, ಶಿವಮೊಗ್ಗ 8, ತುಮಕೂರು 24, ಉಡುಪಿ 57, ಉತ್ತರ ಕನ್ನಡ 18, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ