ಮತ್ತೆ ತುಂಬಿದ ತುಂಗಭದ್ರಾ ಜಲಾಶಯ: ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

posted in: ರಾಜ್ಯ | 0

ಹೊಸಪೇಟೆ:ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ 10 ಗೇಟ್‌ಗಳನ್ನು ತೆರೆದು ನದಿಗೆ 19 ಸಾವಿರ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಇದರ ಜೊತೆಯಲ್ಲೇ ನದಿಪಾತ್ರದ ಜನ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ತುಂಗಭದ್ರಾ ಮಂಡಳಿ ಸೂಚಿಸಿದೆ.
ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಬೀಳುತ್ತಿರುವ ಮಳೆಯಿಂದಾಗಿ ಜಲಾಶಯದ ಒಳ ಹರಿವಿನಲ್ಲಿ ಹೆಚ್ಚಳವಾಗಿದೆ. ಜಲಾಶಯದ ಒಳ ಹರಿವು ಸದ್ಯ 30,861 ಕ್ಯುಸೆಕ್‌ನಷ್ಟಿದ್ದು, ಇದು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ನದಿಪಾತ್ರದ ಜನರು, ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ತುಂಗಭದ್ರಾ ಮಂಡಳಿ ಸೂಚಿಸಿದೆ. ಯಾಕೆಂದರೆ ನೀರು ಹೆಚ್ಚಳವಾದರೆ ಹೆಚ್ಚಿನ ಪ್ರಮಾಣದ ನೀರನ್ನುಹೊರಕ್ಕೆ ಬಿಡಬೇಕಾಗುತ್ತದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ