ಮೊಹಾಲಿ ಮನೆಯಲ್ಲಿ ಶವವಾಗಿ ಪತ್ತೆಯಾದ ರಾಷ್ಟ್ರಮಟ್ಟದ ಶೂಟರ್

ಚಂಡೀಗಢ : ಅಂತಾರಾಷ್ಟ್ರೀಯ ಶೂಟರ್‌ ನಮನ್‌ವೀರ್ ಸಿಂಗ್‌ ಬ್ರಾರ್‌ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ದೇಹಕ್ಕೆ ಗುಂಡು ತಗುಲಿ ಮೃತಪಟ್ಟಿದ್ದು ಶಂಕೆ ವ್ಯಕ್ತವಾಗಿದ್ದು,ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
28 ವರ್ಷದ ಶೂಟರ್‌ ನಮನ್‌ ವೀರ್‌ ಸಿಂಗ್‌ ಬ್ರಾರ್‌ ಅವರು ಸೋಮವಾರ ಬೆಳಗ್ಗೆ ಮೊಹಾಲಿಯಲ್ಲಿರುವ ತಮ್ಮ ಮನೆಯಲ್ಲಿ ಸಾವಿಗೀಡಾಗಿದ್ದು,ತಮ್ಮ ತಲೆಗೆ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ದಕ್ಷಿಣ ಕೊರೊಯಾದಲ್ಲಿ ನಡೆದ ವಿವಿ ವಿಶ್ವಮಟ್ಟದ ಶೂಟಿಂಗ್‌ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದ ನಮನ್‌ ವೀರ್‌ ಸಿಂಗ್‌ ಈ ಬಾರಿ ಕಳೆದ ಮಾರ್ಚ್‌ನಲ್ಲಿ ನಡೆದ ಐಎಸ್‌ಎಸ್‌ಎಫ್‌ ವಿಶ್ವಕಪ್‌ ಟೂರ್ನಿಯಲ್ಲಿ ಅರ್ಹತಾ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. ಹಲವು ರಾಷ್ಟ್ರೀಯ ಮಟ್ಟದ ಹಲವು ಸ್ಪರ್ಧೆಗಳಲ್ಲಿ ಭಾಗಿಯಾಗಿದ್ದರು.
ನಮನ್‌ ವೀರ್‌ ಸಿಂಗ್‌ ಅವರ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ವರದಿ ಬಂದ ನಂತರದಲ್ಲಿ ಸಾವಿನ ಹಿಂದಿನ ನಿಖರ ಕಾರಣ ತಿಳಿದುಬರಲಿದೆ. ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟರೂ ಅದಕ್ಕೆ ಕಾರಣವೇನು ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಮೊಹಾಲಿ ಉಪ ಪೊಲೀಸ್‌ ಆಯುಕ್ತ ಗುರುಶೇರ್‌ ಸಿಂಗ್‌ ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ