ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ-ಕೊಲೆ ಮಾಡಿದ ಆರೋಪಿಯ ವಿರುದ್ಧ ಎನ್ಕೌಂಟರ್ ನಡೆಯಬೇಕು ಎಂದ ತೆಲಂಗಾಣ ಸಚಿವ

ಹೈದರಾಬಾದ್: ಹೈದರಾಬಾದ್ ಅತ್ಯಾಚಾರ ಪ್ರಕರಣದ ( Hyderabad rape case) ಆರೋಪಿಗಳನ್ನು “ಎನ್‌ಕೌಂಟರ್‌ ನಡೆಸಿ ಕೊಲ್ಲಲಾಗುವುದು” ಎಂದು ತೆಲಂಗಾಣ ಕಾರ್ಮಿಕ ಸಚಿವ ಮಲ್ಲಾ ರೆಡ್ಡಿ ಹೇಳಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.
ಹೈದರಾಬಾದಿನ ಸೈದಾಬಾದ್ ನಲ್ಲಿ 6 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಕೇಳಿದಾಗ, “ನಾವು ಆರೋಪಿಗಳನ್ನು ಖಂಡಿತವಾಗಿಯೂ ಬಂಧಿಸುತ್ತೇವೆ ಮತ್ತು ಎನ್‌ಕೌಂಟರ್‌ ಮಾಡುತ್ತೇವೆ” ಎಂದು ಸಚಿವ ಮಲ್ಲಾ ರೆಡ್ಡಿ ಹೇಲಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.
ಮಲ್ಲಾ ರೆಡ್ಡಿ ಹೈದರಾಬಾದ್ ಅತ್ಯಾಚಾರ ಪ್ರಕರಣದಲ್ಲಿ 6 ವರ್ಷದ ಸಂತ್ರಸ್ತೆಗೆ ಶೀಘ್ರ ನ್ಯಾಯ ಒದಗಿಸುವ ಭರವಸೆ ನೀಡಿದರು.
ನಾವು ಕುಟುಂಬ ಸದಸ್ಯರನ್ನು ಭೇಟಿಯಾಗುತ್ತೇವೆ ಮತ್ತು ಅವರಿಗೆ ಪರಿಹಾರ ನೀಡುತ್ತೇವೆ. ಅವರಿಗೆ ಸಹಾಯ ಮಾಡುತ್ತೇವೆ” ಎಂದು ಮಂಗಳವಾರ ಕಾರ್ಯಕ್ರಮವೊಂದರ ನಂತರ ಸುದ್ದಿಗಾರರೊಂದಿಗೆ ಮಾತನಾಡುವಾಗ ಮಲ್ಲಾ ರೆಡ್ಡಿ ಹೇಳಿದ್ದಾರೆ.
ನಾವು ಖಂಡಿತವಾಗಿಯೂ ಆರೋಪಿಯನ್ನು ಬಂಧಿಸುತ್ತೇವೆ ಮತ್ತು ಅವರನ್ನು ಎನ್‌ಕೌಂಟರ್‌ ಮಾಡಿ ಕೊಲ್ಲುತ್ತೇವೆ. ಬಿಡುವ ಪ್ರಶ್ನೆಯೇ ಇಲ್ಲ” ಎಂದು ಅವರು ಹೇಳಿದ್ದಾರೆ.
ಸೆಪ್ಟೆಂಬರ್ 9 ರಂದು ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದು ಕೊಲೆ ಮಾಡಲಾಗಿದೆ. ಆಕೆಯ ದೇಹವು ಬೀಗ ಹಾಕಿದ ಮನೆಯಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆಯ ನೆರೆಹೊರೆಯ 30ರ ಹರೆಯದ ಆರೋಪಿಯನ್ನು ಹುಡುಕುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
15 ತಂಡಗಳನ್ನು ರಚಿಸಿ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಕ್ಕೆ ಕಳುಹಿಸಲಾಗಿದೆ. 6 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ಹೈದರಾಬಾದ್ ಪೊಲೀಸರು 10 ಲಕ್ಷ ಬಹುಮಾನ ಘೋಷಿಸಿದ್ದಾರೆ.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ