ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ: ಕರಾವಳಿ ಜಿಲ್ಲೆಗಳಲ್ಲಿ ಅಧಿಕ

ಬೆಂಗಳೂರು: ಮುಂದಿನ ಮೂರು ದಿನಗಳು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರವಾಗಲಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಹಾಗೂ ನೈಋತ್ಯ ಭಾಗದೆಡೆಗೆ ಮಾರುತಗಳು ಚಲಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಟಕದ ಕರಅವಲಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಕೂಡ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ಅಧಿಕ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆ ಇದೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement