ಬೆಳಗಾವಿಯಲ್ಲಿ ಕುಂದಾಪುರ ಮೂಲದ ವ್ಯಕ್ತಿಯ ಕೊಲೆ

posted in: ರಾಜ್ಯ | 0

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಪಾನ್‌ ಬೀಡಾ ಅಂಗಡಿಯವನನ್ನು ಕೊಲೆಗೈದ ಘಟನೆ ಮಂಗಳವಾರ ರಾತ್ರಿ ಇಲ್ಲಿ ನಡೆದಿದೆ.
ಬಾಲಕೃಷ್ಣ ಶೆಟ್ಟಿ (52) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ..
ವಡಗಾವಿ ಲಕ್ಷ್ಮೀನಗರದಲ್ಲಿ ಪಾನ್ ಬೀಡಾ ಅಂಗಡಿ ನಡೆಸುತ್ತಿದ್ದ ಬಾಲಕೃಷ್ಣ ಶೆಟ್ಟಿ ಅವರೊಂದಿಗೆ ನಿನ್ನೆ (ಮಂಗಳವಾರ) ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ ವ್ಯಕ್ತಿ ರಾತ್ರಿ ಅವರ ಮನೆಗೆ ತೆರಳಿ ಬಾಗಿಲು ತಟ್ಟಿ ಕೊಲೆ ಮಾಡಿದ್ದಾನೆ.
ಈ ಸಂಬಂಧ ಪೊಲೀಸರು   ಶಹಾಪುರ ಭಾರತ ನಗರ ನಿವಾಸಿ  ದತ್ತಾತ್ರೇಯ ಎಂಬವರರನ್ನು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಬಾಲಕೃಷ್ಣ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಮುಳ್ಳಿಕಟ್ಟೆಯವರಾಗಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ