ಕರ್ನಾಟಕದಲ್ಲಿ ಕೊರೊನಾ ಹೊಸ ಸೋಂಕು ನಿನ್ನೆಗಿಂತ ದುಪ್ಪಟ್ಟು..!

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಇಳಿಕೆಯಾಗಿದ್ದ ಕೋರೊನಾ ಸೋಂಕು ಸಂಖ್ಯೆ ಇಂದು (ಬುಧವಾರ) ನಿನ್ನೆಗಿಂತ ದುಪ್ಪಟ್ಟಾಗಿದೆ.
ಆದರೆ ಕೊರೊನಾ ಸೋಂಕಿನ ಸಾವಿನ ಸಂಖ್ಯೆ ಇಳಿಮುಖವಾಗಿದೆಎಂದು ಆರೋಗ್ಯ ಮತ್ತು ‌ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು ಹೊಸದಾಗಿ 1116 ಮಂದಿಗೆ ಸೋಂಕು ದೃಢಪಟ್ಟಿದ್ದು, 8 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 970 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 15,892 ರಷ್ಟು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 29,64,083ಕ್ಕೆ ಏರಿಕೆಯಾಗಿದೆ, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 29,10,626 ಕ್ಕೆ ಹೆಚ್ಚಳವಾಗಿದೆ.
ಸೋಂಕಿನಿಂದ ಒಟ್ಟಾರೆ ಮೃತಪಟ್ಟವರ ಸಂಖ್ಯೆ 37,537ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆ, ಬೀದರ್, ಗದಗ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇಂದು ಯಾವುದೇ ಸೋಂಕು ದೃಢಪಟ್ಟಿಲ್ಲ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.65ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ 0.71 ಕ್ಕೆ ಇಳಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಏರಿಕೆಯಾಗಿದೆ .ಇಂದು 462 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಹಾಗೂ 5 ಮಂದಿ ಮೃತಪಟ್ಡಿದ್ದಾರೆ. 265 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರು ನಗರ. -462 ನಗರ ಹೊರತುಪಡಿಸಿದರೆ ಚಿಕ್ಕಮಗಳೂರು- 50, ದಕ್ಷಿಣ ಕನ್ನಡ -102, ಹಾಸನ – 81, ಕೊಡಗು – 67, ಮೈಸೂರು -76, ತುಮಕೂರು -60, ಉಡುಪಿ – 89 ಇಲ್ಲಿ ಹೆಚ್ಚಿ ಪ್ರಕರಣಗಳು ವರದಿಯಾಗಿವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

15-09-2021 HMB Kannada

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement