ಟಿ- 20 ವಿಶ್ವಕಪ್ ನಂತರ ಭಾರತದ ಟಿ -20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್‌ ಬೈ..!

ನವದೆಹಲಿ: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಗುರುವಾರ (ಸೆಪ್ಟೆಂಬರ್ 16) ಐಸಿಸಿ ಪುರುಷರ ಟಿ -20 ವಿಶ್ವಕಪ್ 2021ರ ಮುಕ್ತಾಯದ ನಂತರ ಟಿ -20 ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಬ್ಯಾಟ್ಸ್‌ಮನ್ ಆಗಿ ಟಿ 20 ತಂಡದ ಭಾಗವಾಗಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.
ನಾನು ಭಾರತವನ್ನು ಪ್ರತಿನಿಧಿಸುವುದಷ್ಟೇ ಅಲ್ಲದೇ ಭಾರತೀಯ ಕ್ರಿಕೆಟ್ ತಂಡವನ್ನು ನನ್ನ ಅತ್ಯುತ್ತಮ ಸಾಮರ್ಥ್ಯದತ್ತ ಮುನ್ನಡೆಸುವ ಅದೃಷ್ಟವನ್ನು ಹೊಂದಿದ್ದೇನೆ. ಭಾರತೀಯ ಕ್ರಿಕೆಟ್ ತಂಡದ ನಾಯಕನಾಗಿ ನನ್ನ ಪಯಣದಲ್ಲಿ ನನಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ತಂಡದ ಸದಸ್ಯರು, ಸಹಾಯಕ ಸಿಬ್ಬಂದಿ, ಆಯ್ಕೆ ಸಮಿತಿ, ನನ್ನ ತರಬೇತುದಾರರು ಮತ್ತು ನಾವು ಗೆಲ್ಲಲು ಪ್ರಾರ್ಥಿಸಿದ ಪ್ರತಿಯೊಬ್ಬ ಭಾರತೀಯರಿಗೂ ಧನ್ಯವಾದ ಹೇಳುತ್ತೇನೆ ಎಂದು ಕೊಹ್ಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೆಲಸದ ಹೊರೆ ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾದ ವಿಷಯವಾಗಿದೆ ಮತ್ತು ಕಳೆದ 8-9 ವರ್ಷಗಳಲ್ಲಿ ನನ್ನ ಅಪಾರವಾದ ಕೆಲಸದ ಹೊರೆಗಳನ್ನು ಪರಿಗಣಿಸಿ ಎಲ್ಲಾ 3 ಫಾರ್ಮ್ಯಾಟ್‌ಗಳನ್ನು ಆಡಿ ಮತ್ತು ಕಳೆದ 5-6 ವರ್ಷಗಳಿಂದ ನಿಯಮಿತವಾಗಿ ಕ್ಯಾಪ್ಟನ್ ಆಗಿದ್ದಾಗ, ನಾನು ಭಾರತವನ್ನು ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ನಲ್ಲಿ ತಂಡ ಮುನ್ನಡೆಸಲು ಸಂಪೂರ್ಣವಾಗಿ ಸಿದ್ಧವಾಗಲು ಜಾಗವನ್ನು ನೀಡಬೇಕು ಎಂದು ನಾನು ಭಾವಿಸುತ್ತೇನೆ ಈ ನಿರ್ಧಾರವು ಸುಲಭದ ಮಾತಲ್ಲ ಮತ್ತು ಟೀಮ್ ಇಂಡಿಯಾ ನಾಯಕತ್ವದ ಗುಂಪಿನ ಪ್ರಮುಖ ಭಾಗವಾಗಿರುವ ಮುಖ್ಯ ಕೋಚ್ ರವಿ ಶಾಸ್ತ್ರಿ ಮತ್ತು ಭಾರತದ ಸೀಮಿತ ಓವರ್‌ಗಳ ಉಪ-ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿದ ನಂತರ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಕೊಹ್ಲಿ ಹೇಳಿದ್ದಾರೆ.
“ಖಂಡಿತವಾಗಿ, ಈ ನಿರ್ಧಾರಕ್ಕೆ ಬರಲು ಸಾಕಷ್ಟು ಸಮಯ ಬೇಕಾಯಿತು. ನನ್ನ ಆಪ್ತ ಜನರೊಂದಿಗೆ ಸಾಕಷ್ಟು ಆಲೋಚನೆ ಮತ್ತು ಚರ್ಚೆಗಳ ನಂತರ, ರವಿ ಭಾಯಿ ಮತ್ತು ರೋಹಿತ್ ಕೂಡ ನಾಯಕತ್ವ ಗುಂಪಿನ ಅತ್ಯಗತ್ಯ ಭಾಗವಾಗಿದ್ದರು, ನಾನು ಕೆಳಗಿಳಿಯಲು ನಿರ್ಧರಿಸಿದೆ ಅಕ್ಟೋಬರ್‌ನಲ್ಲಿ ದುಬೈನಲ್ಲಿ ನಡೆದ ಟಿ 20 ವಿಶ್ವಕಪ್ ನಂತರ ಟಿ 20 ನಾಯಕನಾಗಿ ಕಳಗಿಳಿಯುವ ಕುರಿತು ನಾನು ಸೆಕ್ರೆಟರಿ ಜಯ್ ಶಾ ಮತ್ತು ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಅವರೊಂದಿಗೆ ಹಾಗೂ ಎಲ್ಲಾ ಆಯ್ಕೆಗಾರರೊಂದಿಗೆ ಮಾತನಾಡಿದ್ದೇನೆ. ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ನಾನು ಭಾರತೀಯ ಕ್ರಿಕೆಟ್ ತಂಡಕ್ಕೆ ನನ್ನ ಸೇವೆಯನ್ನು ಮುಂದುವರಿಸುತ್ತೇನೆ “ಎಂದು ಕೊಹ್ಲಿ ಹೇಳಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement