ಆನೇಕಲ್ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

 

ಆನೇಕಲ್: ಇಂದು (ಸೆ.16) ಬೆಳ್ಳಂಬೆಳಗ್ಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನೆರಳೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ನೆರಳೂರು ಗೇಟ್ ಬಳಿ ಲಾರಿಗೆ ಆ್ಯಂಬುಲೆನ್ಸ್ ಹಿಂಬದಿಯಿಂದ ಗುದ್ದಿದೆ ಎನ್ನಲಾಗಿದ್ದು, ಆ್ಯಂಬುಲೆನ್ಸ್​ನಲ್ಲಿದ್ದ ಮೂವರು ಪುರುಷರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಆ್ಯಂಬುಲೆನ್ಸ್ ನಜ್ಜುಗುಜ್ಜಾಗಿದೆ. ಆ್ಯಂಬುಲೆನ್ಸ್ ಮಹಾರಾಷ್ಟ್ರದಾಗಿದ್ದು, ಹೊಸೂರಿನತ್ತ ಹೋಗುತ್ತಿತ್ತು. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮುಂಜಾನೆ ಐದು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಆ್ಯಂಬುಲೆನ್ಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ: ಸರ್ಕಾರದ ಆದೇಶ

ನಿಮ್ಮ ಕಾಮೆಂಟ್ ಬರೆಯಿರಿ

advertisement