ಬಿಹಾರದ ತೈಲ ಸಂಸ್ಕರಣಾಗಾರ ಸ್ಫೋಟ: 8 ಜನರ ಸ್ಥಿತಿ ಗಂಭೀರ

ಪಾಟ್ನಾ: ಬಿಹಾರದ ಬೇಗುಸರಾಯ್ ಜಿಲ್ಲೆಯ ಬರೌನಿ ತೈಲ ಸಂಸ್ಕರಣಾ ಘಟಕದಲ್ಲಿ ಸಂಭವಿಸಿದ ಸ್ಫೋಟದಿಂದ 15 ಮಂದಿ ಗಾಯಗೊಂಡಿದ್ದು, ಇವರಲ್ಲಿ 8 ಜನರ ಸ್ಥಿತಿ ಗಂಭೀರವಾಗಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದಲ್ಲಿ ಗಾಯಗೊಂಡವರನ್ನು ಬರೌನಿ ಸಂಸ್ಕರಣಾ ಘಟಕದ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬರೌನಿ ಸಂಸ್ಕರಣಾ ಘಟಕವು ಕಳೆದ ಒಂದು ತಿಂಗಳಿನಿಂದ ಬಂದ್ ಆಗಿತ್ತು. ಮಂಗಳವಾರವಷ್ಟೇ ಘಟಕದಲ್ಲಿ ಕಾರ್ಯಾರಂಭ ಮಾಡಿತ್ತು. ಎರಡು ದಿನಗಳಿಂದ ಸರಳವಾಗಿ ನಡೆದುಕೊಂಡು ಹೋಗುತ್ತಿದ್ದ ಘಟಕದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಭಾರಿ ಸ್ಫೋಟ ಸಂಭವಿಸಿದೆ ಎಂದು ತೈಲ ಸಂಸ್ಕರಣಾ ಘಟಕದ ಅಧಿಕಾರಿ ಇ. ಡಿ. ಶುಕ್ಲಾ ತಿಳಿಸಿದ್ದಾರೆ.
ನಾವು ಎಲ್ಲ ರೀತಿಯ ಉತ್ಪಾದನೆಯನ್ನು ನಿಲ್ಲಿಸಿದ್ದೇವೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಒಳಗೆ ಯಾರೂ ಸಿಕ್ಕಿಬಿದ್ದಿಲ್ಲ ಎಂದು ನಾವು ಖಚಿತಪಡಿಸಿಕೊಳ್ಳುತ್ತಿದ್ದೇವೆ. ಸಂಸ್ಕರಣಾ ಘಟಕದಲ್ಲಿ ಮಾನವ ಚಲನೆಯನ್ನು ಸಂಪೂರ್ಣವನ್ನು ನಿಲ್ಲಿಸಲಾಗಿದೆ. ಸ್ಫೋಟಕ್ಕೆ ಮೂಲ ಕಾರಣವೇನು ಎಂಬುದನ್ನು ಪತ್ತೆ ಮಾಡಲು ಪರಿಣಿತ ಎಂಜಿನಿಯರ್‌ಗಳಿಗೆ ಮಾತ್ರ ಪರೀಕ್ಷೆಗೆ ಅನುಮತಿ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಅಮಿತ್ ಶಾ ವೀಡಿಯೊ ತಿರುಚಿದ ಆರೋಪ: ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂಗೆ ಸಮನ್ಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement