ಪ್ರೌಢಶಾಲೆ 1801 ಸಹ ಶಿಕ್ಷಕರ ನೇಮಕಕ್ಕೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ 3,590 ಪ್ರೌಢಶಾಲೆ ಸಹಶಿಕ್ಷಕ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 1801 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಟಿ.ಎನ್.ಬಾಲಕೃಷ್ಣ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 1801 ಶಿಕ್ಷಕರ ಹುದ್ದೆ ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣಕಾಸು ಇಲಾಖೆಯ ಅನುಮತಿ ಪಡೆದು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 47 ಸರ್ಕಾರಿ ಪ್ರೌಢಶಾಲೆಗಳಿದ್ದು, 51 ಆಂಗ್ಲ ಭಾಷಾ ಶಿಕ್ಷಕರ ಹುದ್ದೆಗಳು ಮಂಜೂರಾಗಿದ್ದು, 11 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement