ಒಂದೇ ಕುಟುಂಬದ ಐವರು ಆತ್ಮಹತ್ಯೆ : ಮೃತದೇಹಗಳ ಮುಂದೆಯೇ 5 ದಿನಗಳಿಂದ ಹಸಿದು ಕುಳಿತಿದ್ದ 3 ವರ್ಷದ ಮಗು

ಬೆಂಗಳೂರು: ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯನ್ನು ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದಿಂದ ಮನೆಯಲ್ಲಿರುವ ಐವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ವರದಿಯಾಗಿದೆ. ಐವರು ನೇಣು ಬಿಗಿದ ಸ್ಥಿತಿಯಲ್ಲಿದ್ದು, ಇದು ಐದು ದಿನಗಳ ಹಿಂದೆ ಘಟನೆ ನಡೆದಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಅದೃಷ್ಟವಶಾತ್​ ಮೂರು ವರ್ಷದ ಮಗು ಬದುಕುಳಿದಿದ್ದು, ಮೃತ ಶರೀರಗಳ ಮುಂದೆಯೇ ಈ ಮಗು ಐದು ದಿನಗಳಿಂದಲೂ ಹಸಿವಿನಿಂದ ಇತ್ತು ಎನ್ನಲಾಗಿದೆ.
ಮೃತರನ್ನು ಭಾರತಿ (50), ಸಿಂಚನ (33), ಸಿಂಧೂರಾಣಿ (30), ಮಧುಸಾಗರ್​ (26) ಮತ್ತು ಒಂಭತ್ತು ತಿಂಗಳ ಮಗು ಎಂದು ಗುರುತಿಸಲಾಗಿದೆ.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಐದು ದಿನಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಡರಹಳ್ಳಿ ಪೊಲೀಸರು ಪ್ರಕರಣ ದಾಖಲಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಎಲ್ಲರ ಶವಗಳೂ ಕೊಳೆತ ಸ್ಥಿತಿಯಲ್ಲಿ ಇರುವುದರಿಂದ ಸುಮಾರು ಐದು ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಬದುಕುಳಿದ ಮೂರು ವರ್ಷದ ಮಗು, ಹಸಿವಿನಿಂದ ಬಳಲಿದೆ. ಆಸ್ಪತ್ರೆಗೆ ಮಗುವನ್ನು ಕರೆದೊಯ್ದು ತಪಾಸಣೆ ಮಾಡಲಾಗಿದೆ.
ಮನೆಯಿಂದ ಯಾರೂ ಹೊರಗಡೆ ಬರದಿರುವುದನ್ನು ಗಮನಿಸಿದ ಸ್ಥಳೀಯರು ಇಂದು ಸಂಜೆ ಮನೆಯ ಕಿಟಕಿ ಗಾಜನ್ನು ಹೊಡೆದು ನೋಡಿದಾಗ ಪ್ರಕರಣ ಬಯಲಿಗೆ ಬಂದಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement