ತಮ್ಮ ಬಗ್ಗೆ ಹರಿದಾಡುತ್ತಿರುವ ವಿಡಿಯೊಕ್ಕೆ ಸ್ಪಷ್ಟನೆ ನೀಡಿದ ಸದಾನಂದ ಗೌಡ; ಶೇರ್ ಮಾಡಿದವರಿಗೆ ಕ್ರಮದ ಎಚ್ಚರಿಕೆ

posted in: ರಾಜ್ಯ | 0

ಬೆಂಗಳೂರು: ತಮ್ಮ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊ ಕುರಿತು ಸ್ಪಷ್ಟನೆ ನೀಡಿ : ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ ಟ್ವೀಟ್ ಮಾಡಿದ್ದಾರೆ. ವಿಡಿಯೊದಲ್ಲಿ ಇರುವುದು ತಾವಲ್ಲ ಎಂದು ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದ್ದಾರೆ.
ನನ್ನನ್ನು ಹೋಲುವಂತೆ ಮಾರ್ಫ್​ ಮಾಡಿದ ಅಥವಾ ತಿರುಚಿದ ವಿಡಿಯೊ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ. ನನ್ನ ವ್ಯಕ್ತಿತ್ವವನ್ನು ಹಾಳುಮಾಡಲು ನನ್ನ ವಿರೋಧಿಗಳು ಈ ವಿಡಿಯೊ ಮಾಡಿದ್ದಾರೆ ಎಂದು ಸದಾನಂದ ಗೌಡ ಸ್ಪಷ್ಟಪಡಿಸಿದ್ದಾರೆ.
ನಾನು ಈಗಾಗಲೇ ಈ ಕುರಿತು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ಅಪರಾಧಿಗಳನ್ನು ಶೀಘ್ರವೇ ಬಂಧಿಸುವ ಕುರಿತು ನನಗೆ ನಂಬಿಕೆಯಿದೆ, ಅಲ್ಲದೆ, ನಾನು ತಂದಿರುವ ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ/ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ’ ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ. ಇಂತಹ ಕೃತ್ಯ ಎಸಗುವವರ ಬಗ್ಗೆ ಮಾಹಿತಿ ಇದ್ದಲ್ಲಿ ತಿಳಿಸುವಂತೆಯೂ ಅವರು ಮನವಿ ಮಾಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   "ನಾನು ನಿರೀಕ್ಷಿಸಿರಲಿಲ್ಲ...": ನೂತನ ಸಂಸತ್ತಿನ ಉದ್ಘಾಟನೆಗೆ ಸಾಕ್ಷಿಯಾಗಿದ್ದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement