ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಅಗಸ್ಟ್ 28, 29 ಮತ್ತು 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ( common entrance test KCET) ಫಲಿತಾಂಶ ಇಂದು (ಸೋಮವಾರ) ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು ಕಡಿಮೆ ಕಾಲಾವಧಿಯಲ್ಲೇ ಫಲಿತಾಂಶ ಪ್ರಕಟವಾಗುತ್ತದೆ. ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಹೇಳಿದ್ದಾರೆ.
ಫಲಿತಾಂಶವು ನಾಳೆ ಸಂಜೆ 4 ಗಂಟೆ ನಂತರ https://cetonline.karnataka.gov.in/kea/ ಈ ಲಿಂಕ್ ನಲ್ಲಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ ತಮ್ಮ ನೋಂದಣಿ ಸಂಖ್ಯೆ ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್ ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. kea.kar.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಹಾಗೆಯೇ ಕೌನ್ಸೆಲಿಂಗ್(Counselling ) ಪ್ರಕ್ರಿಯೆಯು ಅಕ್ಟೋಬರ್ನಿಂದ ಪ್ರಾರಂಭವಾಗಲಿದೆ. ಈ ವರ್ಷ ಒಟ್ಟು 2,01,834 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ