ತಾನು ಪಂಜಾಬ್‌ ಸಿಎಂ ಆಗುವ ಪ್ರಸ್ತಾಪ ತಿರಸ್ಕರಿಸಿದ ಅಂಬಿಕಾ ಸೋನಿ: ಸಿಖ್ ನಾಯಕರೇ ಸಿಎಂ ಆಗಲಿ ಎಂದು ಪಕ್ಷಕ್ಕೆ ಸಲಹೆ

ನವದೆಹಲಿ: ಎಲ್ಲ ಊಹಾಪೋಹಗಳಿಗೆ ಕೊನೆ ಹಾಡಿರುವ ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ ಪಂಜಾಬ್ ನ ಮುಂದಿನ ಮುಖ್ಯಮಂತ್ರಿಯಾಗುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ತಡರಾತ್ರಿಯ ಸಭೆಯಲ್ಲಿ ಹಿರಿಯ ನಾಯಕಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಉತ್ತರಾಧಿಕಾರಿಯಾಗಿ ಸಿಖ್ ನಾಯಕನನ್ನು ಆಯ್ಕೆ ಮಾಡಲು ಪಕ್ಷವನ್ನು ಕೇಳಿದ್ದಾರೆ
ಸೋನಿ ಪ್ರಸ್ತಾಪವನ್ನು ತಿರಸ್ಕರಿಸಿದಾಗ ಕಾಂಗ್ರೆಸ್ ನಾಯಕರಾದ ಸೋನಿಯಾ ಮತ್ತು ರಾಹುಲ್ ಗಾಂಧಿ ತಡರಾತ್ರಿ ಸಭೆಯಲ್ಲಿ ಹಾಜರಿದ್ದರು ಎಂದು ವರದಿಗಳು ತಿಳಿಸಿವೆ. ಪಂಜಾಬ್ ಮುಖ್ಯಮಂತ್ರಿಯಾಗಿ ಸಿಖ್ ಇಲ್ಲದಿರುವುದು ಪಕ್ಷಕ್ಕೆ “ದುಷ್ಪರಿಣಾಮ ಆಗಬಹುದು ಎಂದು ಮುಖ್ಯಮಂತ್ರಿ ಹುದ್ದೆಗೆ ಹೆಸರು ಮುಂಚೂಣಿಯಲ್ಲಿರುವ ಕಾಂಗ್ರೆಸ್ ನಾಯಕಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟವಿ ವರದಿ ಮಾಡಿದೆ.
ಏತನ್ಮಧ್ಯೆ, ಕಾಂಗ್ರೆಸ್‌ ಪಕ್ಷ ಮುಂದಿನ 2-3 ಗಂಟೆಗಳಲ್ಲಿ ಪಂಜಾಬಿನ ಹೊಸ ಮುಖ್ಯಮಂತ್ರಿಯನ್ನು ಘೋಷಿಸುವ ನಿರೀಕ್ಷೆಯಿದೆ. ನಿನ್ನೆ ಶನಿವಾರ, ಅಮರಿಂದರ್‌ ಸಿಂಗ್ ಅವರು ಪಂಜಾಬ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಕೂಡಲೇ, ಕಾಂಗ್ರೆಸ್ ಶಾಸಕಾಂಗ ಪಕ್ಷವು (ಸಿಎಲ್‌ಪಿ) ಅವಿರೋಧವಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಿಂಗ್‌ ಉತ್ತರಾಧಿಕಾರಿ ನೇಮಕ ಅಧಿಕಾರ ನೀಡುವ ನಿರ್ಣಯವನ್ನು ಅಂಗೀಕರಿಸಿತು.
“ಮುಂದಿನ 2-3 ಗಂಟೆಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಕಾಂಗ್ರೆಸ್ ಶಾಸಕ ಸುಖಜಿಂದರ್ ಸಿಂಗ್ ರಾಂಧವ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಏತನ್ಮಧ್ಯೆ, ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಸುನಿಲ್ ಜಾಖರ್, ಪ್ರಸ್ತುತ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಪಕ್ಷದ ನಾಯಕರಾದ ಟ್ರಿಪ್ಟ್ ರಾಜಿಂದರ್ ಸಿಂಗ್ ಬಾಜ್ವಾ ಮತ್ತು ಸುಖಜಿಂದರ್ ಸಿಂಗ್ ರಾಂಧವ ಅವರು ಮುಂದಿನ ಪಂಜಾಬ್ ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಪ್ರಮುಖ ಸುದ್ದಿ :-   ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement