ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಹೊರವಲಯದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿ ಒಟ್ಟು 20 ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ರೇವ್ ಪಾರ್ಟಿಯಲ್ಲಿ ವಿದ್ಯಾರ್ಥಿಗಳು, ಶ್ರೀಮಂತರ ಮಕ್ಕಳು ಭಾಗಿಯಾಗಿದ್ದಾರೆ. ಪೊಲೀಸರು ಹಲವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ.
ಬೆಂಗಳೂರು ಹೊರವಲಯದ ಆನೇಕಲ್ ಬಳಿಯಲ್ಲಿರುವ ತಮ್ಮನಾಯಕನಹಳ್ಳಿ ಬಳಿಯಲ್ಲಿರುವ ರೆಸಾರ್ಟ್ ಒಂದರಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ರೆಸಾರ್ಟ್ ನಿರ್ಜನ ಪ್ರದೇಶದಲ್ಲಿದ್ದು ಇಲ್ಲಿ ಆಗಾಗ ರೇವ್ ಪಾರ್ಟಿ ನಡೆಸಲಾಗುತ್ತಿತ್ತು ಎನ್ನಲಾಗಿದೆ. ಪೊಲೀಸರು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದು, ಡ್ರಗ್ಸ್ ಸೇವಿಸಿ ಹುಚ್ಚೆದ್ದು ಕುಣಿಯುತ್ತಿದ್ದ ಅರೆ ನಗ್ನ ಸ್ಥಿತಿಯಲ್ಲಿರುವ ಯುವಕ, ಯುವತಿಯರಲ್ಲಿ ಅನೇಕರನ್ನು ಬಂಧಿಸಿದ್ದಾರೆ. ಅನೇಕರು ಪರಾರಿಯಾಗಿದ್ದಾರೆ.
ಸುಮಾರು 20 ಜನರನ್ನು ವಶಕ್ಕೆ ಪಡೆದಿದ್ದು, 6 ಕಾರು ಹಾಗೂ 15ಕ್ಕೂ ಹೆಚ್ಚು ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಪೆಡ್ಲರ್ ಗಳ ವಿರುದ್ಧ ಕಾರ್ಯಚರಣೆ ನಡೆಸುತ್ತಿರುವ ಪೊಲೀಸರು ಖಚಿತ ಮಾಹಿತಿ ಮೇರೆಗೆ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದಾರೆ.ತನಿಖೆ ನಡೆಯುತ್ತಿದೆ.


ನಿಮ್ಮ ಕಾಮೆಂಟ್ ಬರೆಯಿರಿ