ಭಕ್ತರಿಗೆ ಆಗಿರುವ ನೋವು ಸರಿಪಡಿಸುತ್ತೇನೆ : ಸಿಎಂ ಬೊಮ್ಮಾಯಿ ಭರವಸೆ

ದಾವಣಗೆರೆ: ನಂಜನಗೂಡು ದೇವಾಲಯ ತೆರವು ಪ್ರಕರಣದಲ್ಲಿ ಕಾನೂನು ತೊಡಕಿನ ಮಧ್ಯೆಯೂ ಶಾಂತಿ ಕದಡುವ ಕೆಲಸಕ್ಕೆ ಇತಿಶ್ರೀ ಹಾಡುವ ಕೆಲಸ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ತ್ರಿಶೂಲ್ ಕಲಾಭವನದಲ್ಲಿ ಹಮ್ಮಕೊಂಡಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇವಸ್ಥಾನ ತೆರವುಗೊಳಿಸಿರುವುದರಿಂದ ಅಲ್ಲಿನ ಭಕ್ತರ ಮನಸ್ಸಿಗೆ ಘಾಸಿಯಾಗಿದೆ. ಆದರೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ. ಎಲ್ಲರಿಗೂ ಒಪ್ಪಿಗೆ ಆಗುವಂತಹ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಈ ಸರ್ಕಾರ ಕಾರ್ಯಕರ್ತರದ್ದು, ಕಾರ್ಯಕರ್ತರ ಭಾವನೆ ನಮಗೆ ಅರ್ಥವಾಗುತ್ತದೆ. ಅವರ ಭಾವನೆಗೆ ಬೆಲೆ ಕೊಡುವಂತಹ ನಿರ್ಣಯಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ಸ್ವಾತಂತ್ರ್ಯ ಚಳವಳಿಯ ಅಲೆಯ ಮೇಲೆ ರಾಜಕಾರಣ ಶುರು ಮಾಡಿತು. ಸ್ಪಷ್ಟ ಸಿದ್ಧಾಂತ, ನಿಖರ ವೈಚಾರಿಕತೆ ದೇಶದ ಬಗ್ಗೆ ನಿಖರ ನಿರ್ಣಯವಿರಲಿಲ್ಲ. ಅದಕ್ಕಾಗಿ ಸ್ವಾಂತಂತ್ರ್ಯಬಂದ ನಂತರ ಆ ಪಕ್ಷವನ್ನು ವಿಸರ್ಜನೆ ಮಾಡಬೇಕು ಎಂದು ಮಹಾತ್ಮ ಗಾಂಧಿಯವರು ಹೇಳಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 10 ಹಳದಿ ಅನಕೊಂಡ ಹಾವುಗಳು ವಶಕ್ಕೆ, ಓರ್ವನ ಬಂಧನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement