ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಬಸ್ ಸಂಚಾರ ಪುನರಾರಂಭ

ಹುಬ್ಬಳ್ಳಿ: ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಯಿಂದ ಧರ್ಮಸ್ಥಳಕ್ಕೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ ಎಂದು ಹುಬ್ಬಳ್ಳಿ ವಾಯವ್ಯ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಕೋವಿಡ್ ಎರಡನೇ ಅಲೆ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ ಮತ್ತಿತರ ಧಾರ್ಮಿಕ ಕ್ಷೇತ್ರಗಳಿಗೆ ಸಾರ್ವಜನಿಕರಿಗೆ ನಿರ್ಬಂಧಗಳನ್ನು ವಿಧಿಸಿದ್ದರಿಂದ ಈ ಕ್ಷೇತ್ರಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇತ್ತೀಚೆಗೆ ಕೋವಿಡ್ ಪೊಸಿಟಿವಿಟಿ ದರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನಿರ್ಬಂಧಗಳ ಸಡಿಲಿಕೆ ಮಾಡಿದ್ದು ಧಾರ್ಮಿಕ ಕ್ಷೇತ್ರಗಳಿಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯದ ನಿರ್ಬಂಧಗಳನ್ನು ರದ್ದುಗೊಳಿಸಿದೆ. ಸಾರ್ವಜನಿಕರ ಬೇಡಿಕೆಯ ಮೇರೆಗೆ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಹಗಲು ಮತ್ತು ರಾತ್ರಿ ಸಮಯದಲ್ಲಿ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಈ ಬಸ್ ಗಳು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ತಿಳಿಸಲಾಗಿದೆ.
ಹಗಲು ಬಸ್ ಬೆಳಿಗ್ಗೆ 6ಕ್ಕೆ ಹುಬ್ಬಳ್ಳಿಯಿಂದ ಹೊರಡುತ್ತದೆ‌.ಸಂಜೆ 5-30ಕ್ಕೆ ಧರ್ಮಸ್ಥಳ ತಲುಪುತ್ತದೆ. ಮರುದಿನ ಧರ್ಮಸ್ಥಳದಿಂದ ಬೆಳಿಗ್ಗೆ 5-30ಕ್ಕೆ ಬಿಟ್ಟು ಸಂಜೆ 4ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತದೆ. ರಾತ್ರಿ ಸಾರಿಗೆ ಬಸ್ ಸಂಜೆ6ಕ್ಕೆ ಹುಬ್ಬಳ್ಳಿಯಿಂದ ಹೊರಡುತ್ತದೆ. ಮರುದಿನ ಬೆಳಿಗ್ಗೆ 5ಕ್ಕೆ ಧರ್ಮಸ್ಥಳ ತಲುಪುತ್ತದೆ. ಸಂಜೆ 6-15ಕ್ಕೆ ಧರ್ಮಸ್ಥಳ ದಿಂದ ಬಿಟ್ಟು ಮರುದಿನ ಬೆಳಿಗ್ಗೆ 5-15ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement