ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಬೆಳಗಾವಿ ವಲಯ ಜಂಟಿ ನಿರ್ದೇಶಕರಾಗಿ ಬಸವರಾಜ ಹೂಗಾರ ಅಧಿಕಾರ ಸ್ವೀಕಾರ

ಬೆಳಗಾವಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಅಧಿಕಾರ ವಿಕೇಂದ್ರಿಕರಣದ ನಿಟ್ಟಿನಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೆ ಇಲಾಖೆಯ ಜಂಟಿ ನಿರ್ದೇಶಕರನ್ನು ನೇಮಿಸಿ ಆದೇಶ ಹೊರಡಿಸಿದ್ದು, ಬೆಳಗಾವಿ ಕಂದಾಯ ವಿಭಾಗಕ್ಕೆ ಬೆಳಗಾವಿ ವಲಯದ ಜಂಟಿ ನಿರ್ದೇಶಕರಾಗಿ ಬಸವರಾಜ ಹೂಗಾರ ಸೋಮವಾರ (ಸೆ.20) ಬೆಳಗಾವಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.
ಬೆಳಗಾವಿ ವಲಯವು ಬೆಳಗಾವಿ, ಬಾಗಲಕೋಟ, ವಿಜಯಪುರ, ಹಾವೇರಿ, ಗದಗ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಾಂಸ್ಕೃತಿಕ ವ್ಯಾಪ್ತಿಯನ್ನು ಹೊಂದಿದೆ.
ಈ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಟ್ರಸ್ಟ್‌ ಗಳು, ಅಕಾಡೆಮಿಗಳು ಮತ್ತು ರಂಗಾಯಣ, ರಂಗಮಂದಿರಗಳು ಹಾಗೂ ಏಳು ಜಿಲ್ಲೆಗಳ ಸಹಾಯಕ ನಿರ್ದೆಶಕರ ಮೇಲ್ವಿಚಾರಣೆಯ ಅಧಿಕಾರವನ್ನು ನೂತನ ಜಂಟಿ ನಿರ್ದೇಶಕರಿಗೆ ನೀಡಲಾಗಿದೆ.
ಕವಿ, ಬರಹಗಾರ ಬಸವರಾಜ ಹೂಗಾರ ಅವರು ಮೂಲತಃ ಬಾಗಲಕೋಟ ಜಿಲ್ಲೆಯ ಸೀಮಿಕೇರಿ ಗ್ರಾಮದವರಾಗಿದ್ದು, ಸಹಾಯಕ ನಿರ್ದೆಶಕರಾಗಿ ತುಮಕೂರು, ಕೊಪ್ಪಳ, ಕಾರವಾರ, ಮಂಡ್ಯ ಮತ್ತು ಧಾರವಾಡ ಹೀಗೆ ಅನೇಕ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರಿನ ಲಲಿತಕಲಾ ಅಕಾಡೆಮಿ ರಜಿಸ್ಟಾರ್ ಆಗಿ ಕಾರ್ಯನಿರ್ವಹಿಸಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿಯು ಇವರ ತತ್ರಾಣಿ ಕಾವ್ಯಕ್ಕೆ ಬಹುಮಾನ ನೀಡಿ ಗೌರವಿಸಿದೆ. “ತತ್ರಾಣಿ”, “ಹಾದಿಜಂಗಮ”, “ಬೀದಿ ಬೆಳಕಿನ ಕಂದಿಲು”‌ ಇವರ ಪ್ರಮುಖ ಕೃತಿಗಳು.ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಪದವಿ ತರಗತಿಗಳಿಗೆ ಇವರ ಕವಿತೆ ಹಾಗೂ ಲೇಖನಗಳು ಪಠ್ಯವಾಗಿವೆ.

ಪ್ರಮುಖ ಸುದ್ದಿ :-   ಹೊನ್ನಾವರದ ಪ್ರಕೃತಿಯ ‘ಮಾಯಾಲೋಕ’ಕ್ಕೆ ಆನಂದ ಮಹೀಂದ್ರಾ ಫಿದಾ ! ಕೇರಳದ ಹಿನ್ನೀರಿನಷ್ಟೇ ಸುಂದರ ಎಂದ ಉದ್ಯಮಿ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement