ಕಾಲ ಎಲ್ಲದ್ದಕ್ಕೂ ಉತ್ತರ ನೀಡಲಿದೆ”: ಐಟಿ ದಾಳಿಗೆ ಮೌನ ಮುರಿದ ಬಾಲಿವುಡ್‌ ನಟ ಸೋನು ಸೂದ್

ಮುಂಬೈ : ತಮ್ಮ ಮನೆ ಹಾಗೂ ಕಚೇರಿ ಮೇಲೆ ತೆರಿಗೆ ಇಲಾಖೆಯಿಂದ ನಡೆದ ದಾಳಿ ಬಗ್ಗೆ ನಟ ಸೋನು ಸೂದ್ ಕೊನೆಗೂ ಮೌನ ಮುರಿದಿದ್ದಾರೆ. ತಮ್ಮ ವಿರುದ್ಧದ ತೆರಿಗೆ ವಂಚನೆಯ ಆರೋಪಕ್ಕೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ನಾಲ್ಕು ದಿನಗಳ ಕಾಲ ಸೋನು ಸೂದ್‌ ಅವರಿಗೆ ಸೇರಿದ ಮನೆ ಹಾಗೂ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ ಐಟಿ ಅಧಿಕಾರಿಗಳು, ಈ ನಟನಿಂದ 20 ಕೋಟಿ ರೂ. ತೆರಿಗೆ ವಂಚನೆಯಾಗಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದ್ದರು. ಇದಕ್ಕೆ ಇಂದು (ಸೆ.20) ಪ್ರತಿಕ್ರಿಯೆ ನೀಡಿರುವ ನಟ ಸೋನು ಸೂದ್‌ ಅವರು, “ನನ್ನ ಚಾರಿಟೆಬಲ್ ಟ್ರಸ್ಟ್ ನಲ್ಲಿರುವ ಪ್ರತಿಯೊಂದು ರೂಪಾಯಿ ಕೂಡ ಕಷ್ಟದಲ್ಲಿರುವವರ ಜೀವ ಉಳಿಸಲು ಕಾಯುತ್ತಿದೆ. ಕಠಿಣವಾದ ದಾರಿಯಲ್ಲಿಯೂ ಕೂಡಾ ಸುಲಭವಾದ ಪ್ರಯಾಣವನ್ನು ಕಾಣಬಹುದು. ಇದು ಎಲ್ಲ ಹಿಂದೂಸ್ತಾನಿಗಳ ಆಶೀರ್ವಾದ ಪರಿಣಾಮ ಎಂದು ಅನಿಸುತ್ತದೆ. ನಾವು ಎಲ್ಲ ಸಂದರ್ಭದಲ್ಲೂ ನಮ್ಮ ದೃಷ್ಟಿಯಿಂದ ನಿಜವಾಗಿ ಏನು ನಡೆದಿದೆ ಎಂಬುದನ್ನು ಹೇಳಬೇಕಾಗಿಲ್ಲ. ಸಮಯ ಎಲ್ಲದ್ದಕ್ಕೂ ಉತ್ತರ ನೀಡಲಿದೆ,’ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ನನ್ನ ಟ್ರಸ್ಟ್‌ನಲ್ಲಿರುವ ಎಲ್ಲಾ ಒಂದು ರೂಪಾಯಿ ಹಣವು ಅತಿ ಮೌಲ್ಯಯುತ ಜೀವವನ್ನು ಉಳಿಸಲು ಹಾಗೂ ಅಗತ್ಯವಿರುವವರಿಗೆ ಸಹಾಯ ಮಾಡಲು ಕಾಯುತ್ತಿದೆ. ನಾನು ಹಲವಾರು ಸಂದರ್ಭದಲ್ಲಿ ಹಲವು ಬ್ರಾಂಡ್‌ಗಳಿಗೆ ನನ್ನ ಸಮಾಜ ಕಲ್ಯಾಣ ಕಾರ್ಯಕ್ಕಾಗಿ ದೇಣಿಗೆ ನೀಡಲು ಕೇಳಿದ್ದೇನೆ, ಅದು ಮುಂದುವರಿಯಲಿದೆ. ನಾನು ಕಳೆದ ನಾಲ್ಕು ದಿನಗಳಿಂದ ಕೆಲವು ಅತಿಥಿಗಳ ಸತ್ಕಾರ ಮಾಡುತ್ತಿದ್ದೆ, ಆದ್ದರಿಂದ ನನಗೆ ಕಳೆದ ನಾಲ್ಕು ದಿನದಿಂದ ನಿಮ್ಮ ಸೇವೆಯನ್ನು ಮಾಡಲು ಸಾಧ್ಯವಾಗಿಲ್ಲ. ಈಗ ನಾನು ಮತ್ತೆ ಜನರ ಸೇವೆಗಾಗಿ ವಾಪಸ್‌ ಬಂದಿದ್ದೇನೆ. ನನ್ನ ಪ್ರಯಾಣ ಮುಂದುವರಿಯುತ್ತದೆ,’ ಎಂದು ಟ್ವೀಟರ್‌ನಲ್ಲಿ ಬರೆದಿದ್ದಾರೆ.
ಬಾಲಿವಿಡ್‌ ನಟ ಸೋನು ಸೂದ್‌ ಸುಮಾರು 20 ಕೋಟಿಗಿಂತ ಅಧಿಕ ತೆರಿಗೆ ವಂಚನೆ ಮಾಡಿದ್ದಾರೆ. ಸೋನು ಅವರ ಲಾಭರಹಿತ ಸಂಸ್ಥೆಯು ಕ್ರೌಡ್‌ಫಂಡಿಂಗ್ ಪ್ಲಾಟ್‌ಫಾರ್ಮ್ ಬಳಸಿಕೊಂಡು ವಿದೇಶಿ ಕೊಡುಗೆದಾರರಿಂದ 2.1 ಕೋಟಿ ಹಣವನ್ನು ಸಂಗ್ರಹಿಸಿದೆ. ಇದು ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆ ಆಗಿದೆ. ಸೋನು ಅವರ ಟ್ರಸ್ಟ್ ಗೆ ಕಳೆದ ಜುಲೈನಿಂದ ಈ ವರ್ಷದ ಏಪ್ರಿಲ್ ವರೆಗೆ 18 ಕೋಟಿ ರೂ. ಹರಿದು ಬಂದಿದೆ. ಇದರಲ್ಲಿ 1.9 ಕೋಟಿ ಹಣ ಮಾತ್ರ ಸಾಮಾಜಿಕ ಕಾರ್ಯಕ್ಕೆ ಬಳಕೆಯಾಗಿದೆ. ಉಳಿದ 17 ಕೋಟಿ ರೂ. ಬಳಕೆಯಾಗದೆ ಉಳಿದಿದೆ ಎಂದು ಶನಿವಾರ ಆದಾಯ ತೆರಿಗೆ ಇಲಾಖೆ ಹೇಳಿತ್ತು.

ಪ್ರಮುಖ ಸುದ್ದಿ :-   'ಅನುಮಾನ ಆಧರಿಸಿ ಇವಿಎಂ ವಿರುದ್ಧ ನಿರ್ದೇಶನ ನೀಡಲು ಸಾಧ್ಯವೇ? : ಸುಪ್ರೀಂ ಕೋರ್ಟ್ ಪ್ರಶ್ನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement