ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ದಾವಣಗೆರೆ : ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದಾವಣಗೆರೆಯ ಭರತ್ ಕಾಲೋನಿಯ ಕೃಷ್ಣ ನಾಯ್ಕ್‌ (35) ಲಾರಿ ಚಾಲಕ, ಪತ್ನಿ ಸುಮಾ (30), ಮಗು ಧೃವ (6) ಆತ್ಮಹತ್ಯೆ ಮಾಡಿಕೊಂಡವರು   ಎಂದು ಗುರುತಿಸಲಾಗಿದೆ. ಕೃಷ್ಣಾ ನಾಯ್ಕ್ ಅವರು ಪತ್ನಿ ಮತ್ತು ಮಗನಿಗೆ ವಿಷ ಕುಡಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರಿಂದಲೇ ಸಾವಿಗೆ ಶರಣಾಗಿರಬಹುದು ಎಂಬುದು ಪ್ರಾಥಮಿಕವಾಗಿ ಸಿಕ್ಕಿರುವ ಮಾಹಿತಿ.
ಸರಸ್ವತಿ ಬಾಯಿ ಮೂಲವ್ಯಾಧಿಯಿಂದ ಬಳಲುತ್ತಿದ್ದರು ಹಾಗೂ ಕೃಷ್ಣಾನಾಯ್ಕ್‌ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದ ತೀವ್ರ ಮನನೊಂದಿದ್ದರು. ಹೀಗಾಗಿ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗುತ್ತಿದೆ. ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಕೃಷ್ಣಾನಾಯ್ಕ್ ಶವ ಪತ್ತೆಯಾಗಿದ್ದರೆ, ಸರಸ್ವತಿ ಬಾಯಿ ಹಾಗೂ ಮಗು ಧ್ರುವ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಮಗನಿಗೆ ಕೇವಲ ಎಂಟು ವರ್ಷ ಎಂದು ಹೇಳಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಅಗಮಿಸಿದ ಆರ್ ಎಂಸಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement