ದ್ವಿತೀಯ ಪಿಯುಸಿ ಪರೀಕ್ಷೆ- 2021 ಫಲಿತಾಂಶ ಪ್ರಕಟ

ಬೆಂಗಳೂರು : ಪುನರಾವರ್ತಿತ ವಿದ್ಯಾರ್ಥಿಗಳು, ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳಿಗಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.
ರಾಜ್ಯದಲ್ಲಿ ಒಟ್ಟು 18414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅವರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಪ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಆದರೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಖಾಸಗಿಯಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿತ್ತು. ಅಲ್ಲದೇ ಹಲವು ವಿದ್ಯಾರ್ಥಿಗಳು ಫಲಿತಾಂಶವನ್ನು ತಿರಸ್ಕರಿಸಿ ಪರೀಕ್ಷೆಗೆ ಹಾಜರಾಗಿದ್ದರು.

0 / 5. 0

ಪ್ರಮುಖ ಸುದ್ದಿ :-   ರಸ್ತೆ ಅಪಘಾತದಲ್ಲಿ ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರ ಜಯರಾಂ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement