ವಿದೇಶಿ ಏಜೆನ್ಸಿಗಳಿಗೆ ಭಾರತದ ರಕ್ಷಣಾ ಮಾಹಿತಿ ನೀಡುತ್ತಿದ್ದ ಬೆಂಗಳೂರಿನ ಬಟ್ಟೆ ವ್ಯಾಪಾರಿ ಬಂಧನ

ಬೆಂಗಳೂರು: ನಗರದ ಸಿಸಿಬಿ ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ವಿಭಾಗದ ಅಧಿಕಾರಿಗಳ ಜಂಟಿ ಕಾರ್ಯಾಚಾರಣೆಯಲ್ಲಿ ವಿದೇಶಿ ಏಜೆನ್ಸಿಗಳಿಗೆ ಭಾರತದ ರಕ್ಷಣಾ ಮಾಹಿತಿ ನೀಡುತ್ತಿದ್ದ ಯುವಕನೊಬ್ಬನ್ನು ಬಂಧಿಸಲಾಗಿದೆ.
ಈತ ರಾಜಸ್ಥಾನ ಮೂಲದ ಈತ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದ ಎಂದು ಹೇಳಲಾಗಿದೆ. ಆರೋಪಿಯು ರಾಜಸ್ಥಾನದ ಬೆರ್ಮರ್ ಮೂಲದವನಾಗಿದ್ದು, ಬೆಂಗಳೂರಿನ ಕಾಟನ್ ಪೇಟೆಯ ಜಾಲಿ ಮೊಹಲ್ಲಾದಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದಾನೆ. ಸದರ್ನ್ ಕಮಾಂಡ್ ಮಿಲಿಟರಿ ಇಂಟೆಲಿಜೆನ್ಸ್ ಮತ್ತು ಸಿಸಿಬಿ, ಬಂಧಿತ ಆರೋಪಿ ಜಿತೇಂದರ್ ಸಿಂಗ್ ವಾಟ್ಸಾಪ್ ಮೂಲಕ ಪಾಕ್ ಮೂಲದ ಏಜೆನ್ಸಿಯೊಂದಿಗೆ ಸಂಪರ್ಕದಲ್ಲಿದ್ದ, ಸೇನಾ ಅಧಿಕಾರಿಯಂತೆ ಸೋಗು ಹಾಕುತ್ತಿದ್ದ ಎಂದು ಆರೋಪಿಸಲಾಗಿದೆ. ಈತ ಸೇನಾ ಪ್ರದೇಶದ ಛಾಯಾಚಿತ್ರಗಳು ಮತ್ತು ವಿವರಗಳನ್ನು ಹಂಚಿಕೊಂಡಿದ್ದರು ಎಂಬ ಆರೋಪದ ಮೇಲೆ ಬಂಧಿಸಲಾಗಿದೆ.ಅಲ್ಲದೆ,  ಈತ ಸೇನೆಯ ಕಮಾಂಡೋ ಸಮವಸ್ತ್ರ ಧರಿಸಿ ಬಾರ್ಮರ್ ನ ಮಿಲಿಟರಿ ಸ್ಟೇಶನ್ ಮಾಹಿತಿ, ಸೇನಾ ವಾಹನಗಳ ಓಡಾಟದ ಮಾಹಿತಿಯನ್ನು ಒದಗಿಸುತ್ತಿದ್ದ ಎಂದು ವರದಿಯಾಗಿದೆ.
ಸೇನೆಗೆ ಸಂಬಂಧಿಸಿದಂತೆ ಹಲವು ಕಟ್ಟಡಗಳ ಫೋಟೊಗಳನ್ನು, ಬಾರ್ಮೆರ್ ನ ಗಡಿ ಭಾಗದ ಫೋಟೊಗಳನ್ನು ಸೇರಿದಂತೆ ಹಲವಾರು ಸೂಕ್ಷ್ಮ ಮಾಹಿತಿಗಳನ್ನು ಆತ ವಿದೇಶಿ ಏಜೆನ್ಸಿಗಳಿಗೆ ರವಾನೆ ಮಾಡುತ್ತಿದ್ದ ಎಂಬ ಆರೋಪದ ಮೇರೆಗೆ ಈತನನ್ನು ಬಂಧಿಸಲಾಗಿದೆ.
ಅಧಿಕೃತ ರಹಸ್ಯ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement