ಕರ್ನಾಟಕ ಸಿಇಟಿ -2021 ಫಲಿತಾಂಶ ಪ್ರಕಟ; 5 ವಿಭಾಗದಲ್ಲೂ ಮೊದಲ ಸ್ಥಾನ ಪಡೆದ ಮೈಸೂರಿನ ಮೇಘನ್‌..!..!

ಬೆಂಗಳೂರು: ಕರ್ನಾಟಕ ಸಿಇಟಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಇಂಜಿನಿಯರಿಂಗ್ (Engineering) , ಕೃಷಿ (Agriculture) , ನ್ಯಾಚುರೋಪಥಿ (Naturopathy) , ಪಶು ವೈದ್ಯಕೀಯ (Veterinary) , ಬಿ-ಫಾರ್ಮಾ ವಿಭಾಗದ ಫಲಿತಾಂಶ ಪ್ರಕಟಿಸಲಾಗಿದೆ.
ಈ ಐದೂ ವಿಭಾಗಗಳಲ್ಲಿ ಮೈಸೂರಿನ ಪ್ರಮತಿ ಹಿಲ್ ವ್ಯೂ ಅಕಾಡೆಮಿಯ ಮೇಘನ್ ಹೆಚ್​.ಕೆ ಪ್ರಥಮ ಸ್ಥಾನ (CET First Rank) ಪಡೆದಿದ್ದಾರೆ. 2020-21ನೇ ಸಾಲಿನ ಸಿಇಟಿ ಫಲಿತಾಂಶ kea.kar.nic.in ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಸಿಇಟಿ ಇಂಜಿನಿಯರಿಂಗ್ ವಿಭಾಗದ ಟಾಪ್ 10 ವಿದ್ಯಾರ್ಥಿಗಳಲ್ಲಿ ಬೆಂಗಳೂರಿನ 9, ಮೈಸೂರಿನ ಒಬ್ಬ ವಿದ್ಯಾರ್ಥಿ ಇದ್ದಾರೆ.
ಸಿಇಟಿಗೆ ನೋಂದಣಿ ಮಾಡಿದ್ದ 2,01,834 ವಿದ್ಯಾರ್ಥಿಗಳ ಪೈಕಿ 1.93 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದಾರೆ. ಇಂಜಿನಿಯರಿಂಗ್ ಕೋರ್ಸ್ ಗೆ 1,83,231 , ಕೃಷಿ ಕೋರ್ಸಿಗೆ 1,52,518 ಅಭ್ಯರ್ಥಿಗಳು, 1,55,760 ಪಶುಸಂಗೋಪನೆ, 1,55,910 ಯೋಗ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಗಣಿತ ಪರೀಕ್ಷೆ ಬರೆದಿರುವ 1.89 ಲಕ್ಷ ವಿದ್ಯಾರ್ಥಿಗಳು, ಜೀವಶಾಸ್ತ್ರ ಪರೀಕ್ಷೆ ಬರೆದಿರುವ 1.62 ಲಕ್ಷ ವಿದ್ಯಾರ್ಥಿಗಳು, ರಸಾಯನಶಾಸ್ತ್ರ ಪರೀಕ್ಷೆ ಬರೆದಿದ್ದ 1.93 ಲಕ್ಷ ವಿದ್ಯಾರ್ಥಿಗಳು, ಭೌತಶಾಸ್ತ್ರ ಪರೀಕ್ಷೆ ಬರೆದಿದ್ದ 1.93 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ.
ಇಂಜಿನಿಯರಿಂಗ್ ಅಥವಾ ತಂತ್ರಜ್ಞಾನ (ಬಿಇ / ಬಿ.ಟೆಕ್): ಕೆಸಿಇಟಿ 2021ರಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ನಡೆದಿದೆ.
B.Tech (Agril. Eng), ಬಿ.ಟೆಕ್ (ಆಹಾರ ತಂತ್ರಜ್ಞಾನ) ಬಿ.ಟೆಕ್ (ಡೈರಿ ತಂತ್ರಜ್ಞಾನ): 2021ರ ಕೆಸಿಇಟಿ ಪರೀಕ್ಷೆಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆಯನ್ನು ಆಧರಿಸಿ ಅರ್ಹತೆ ಪಡೆಯಲಿದ್ದಾರೆ.

ಪ್ರಮುಖ ಸುದ್ದಿ :-   'ಅಕ್ರಮ' ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ : ಮಹಾರಾಷ್ಟ್ರ ಸೈಬರ್ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್

ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ ಐದು ಸ್ಥಾನಗಳು

ಮೇಘನ್‌ ಹೆಚ್​.ಕೆ. – ಮೈಸೂರು ಪ್ರಮತಿ ಹಿಲ್‌ ವೀವ್‌ ಅಕಾಡೆಮಿ
ಪ್ರೇಮಾಂಕುರ್ ಸಿ- ನ್ಯಾಷನಲ್‌ ಪಬ್ಲಿಕ್ ಸ್ಕೂಲ್, ಯಲಹಂಕ, ಬೆಂಗಳೂರು
ಬಿ.ಎನ್. ಅನಿರುದ್ಧ– ಆಕ್ಸ್‌ಫರ್ಡ್‌ ಪಿಯು ಕಾಲೇಜು, ಉಲ್ಲಾಳ, ಬೆಂಗಳೂರು
ನಿರಂಜನ್ ರೆಡ್ಡಿ -ಶ್ರೀಚೈತನ್ಯ ಟೆಕ್ನೋ ಸ್ಕೂಲ್, ವೀರಣ್ಣ ಪಾಳ್ಯ ಬೆಂಗಳೂರು
ಆದಿತ್ಯ – ನಾರಾಯಣ ಇ- ಟೆಕ್ನೋ ಸ್ಕೂಲ್, ವಿದ್ಯಾರಣ್ಯಪುರ, ಬೆಂಗಳೂರು

 

ಸಿಇಟಿ ಕೃಷಿ ವಿಭಾಗದಲ್ಲಿ ಮೊದಲ ಐದು ಸ್ಥಾನಗಳು

ಮೇಘನ್‌ ಹೆಚ್​.ಕೆ. – ಮೈಸೂರು ಪ್ರಮತಿ ಹಿಲ್‌ ವ್ಯೂ ಅಕಾಡೆಮಿ
ರೀತಮ್. ಬಿ. – ಎಕ್ಸ್‌ಪರ್ಟ್ ಪಿಯು ಕಾಲೇಜು, ಮಂಗಳೂರು
ಆದಿತ್ಯ ಪ್ರಭಾಸ್ – ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ಕೆಆರ್ ಪುರಂ
ತೇಜಸ್ – ಎಕ್ಸ್‌ಪರ್ಟ್ ಪಿಯು ಕಾಲೇಜು, ಮಂಗಳೂರು
ಸುಜ್ಞಾನ ಆರ್ ಶೆಟ್ಟಿ – ಆಳ್ವಾಸ್ ಪಿಯು ಕಾಲೇಜು, ಮೂಡಬಿದಿರೆ

 

ನ್ಯಾಚುರೋಪತಿ ಆ್ಯಂಡ್ ಯೋಗಿಕ್ ಸೈನ್ಸ್‌: ಮೊದಲ ಐದು ಸ್ಥಾನಗಳು

ಮೇಘನ್ ಹೆಚ್​.ಕೆ – ಮೈಸೂರಿನ ಪ್ರಮತಿ ಹಿಲ್ ವ್ಯೂ ಅಕಾಡೆಮಿ
ವರುಣ್ ಆದಿತ್ಯ- ಶ್ರೀ ಚೈತನ್ಯ ಟೆಕ್ನೋ ಕಾಲೇಜು, ಮಾರತ್ತಹಳ್ಳಿ
ರೀತಮ್. ಬಿ. – ಎಕ್ಸ್‌ಪರ್ಟ್ ಪಿಯು ಕಾಲೇಜು, ಮಂಗಳೂರು
ಮೊಹಮ್ಮದ್ ಕೈಫ್ ಕೆ ಮುಲ್ಲಾ – ಆರ್​ಎಲ್ ಪಿಯು ಕಾಲೇಜು, ಬೆಳಗಾವಿ
ಎಂ. ಹಯವದನ. ಎಸ್. – ವಿದ್ಯಾಕಿರಣ ಪಿಯು ಕಾಲೇಜು, ಬಳ್ಳಾರಿ

ಪ್ರಮುಖ ಸುದ್ದಿ :-   ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

 

 ಪಶುವೈದ್ಯಕೀಯ ವಿಜ್ಞಾನ ವಿಭಾಗ:ಮೊದಲ ಐದು ಸ್ಥಾನಗಳು

ಮೇಘನ್ ಹೆಚ್​.ಕೆ. – ಮೈಸೂರಿನ ಪ್ರಮತಿ ಹಿಲ್ ವ್ಯೂ ಅಕಾಡೆಮಿ
ವರುಣ್ ಆದಿತ್ಯ – ಶ್ರೀ ಚೈತನ್ಯ ಟೆಕ್ನೋ ಕಾಲೇಜು, ಮಾರತ್ತಹಳ್ಳಿ
ರೀತಮ್ ಬಿ. – ಎಕ್ಸ್‌ಪರ್ಟ್ ಪಿಯು ಕಾಲೇಜು, ಮಂಗಳೂರು
ಮೊಹಮ್ಮದ್ ಕೈಫ್ ಕೆ ಮುಲ್ಲಾ – ಆರ್​ಎಲ್​ ಪಿಯು ಕಾಲೇಜು, ಬೆಳಗಾವಿ
ಎಂ. ಹಯವದನ. ಎಸ್. – ವಿದ್ಯಾಕಿರಣ ಪಿಯು ಕಾಲೇಜು, ಬಳ್ಳಾರಿ

ಸಿಇಟಿ ಫಲಿತಾಂಶ kea.kar.nic.in ವೆಬ್​ಸೈಟ್​ನಲ್ಲಿ ಲಭ್ಯವಿದೆ. ಆಗಸ್ಟ್ 28 ಮತ್ತು 29ರಂದು ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET-2021) ಫಲಿತಾಂಶ ಇಂದು ಆನ್​ಲೈನ್​ನಲ್ಲಿ ಪ್ರಕಟವಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕೃತ ವೆಬ್‌ಸೈಟ್ cetonline.karnataka.gov.in ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು. ಕರ್ನಾಟಕ ಸಿಇಟಿ ಫಲಿತಾಂಶವು ಅಭ್ಯರ್ಥಿಗಳು ಪಡೆದ ವಿಷಯವಾರು ಅಂಕಗಳು, ಒಟ್ಟು ಅಂಕಗಳು ಮತ್ತು ಶ್ರೇಣಿಯನ್ನು ಒಳಗೊಂಡಿರುತ್ತದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement