ರಷ್ಯಾ ಪೆರ್ಮ್ ಸ್ಟೇಟ್ ವಿವಿಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: 8 ಸಾವು, ಕಿಟಕಿಯಿಂದ ಜಿಗಿದು ಓಡಿದ ವಿದ್ಯಾರ್ಥಿಗಳು.. ವಿಡಿಯೊದಲ್ಲಿ ಸೆರೆ

ಮಾಸ್ಕೋ: ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಈ ವರ್ಷ ನಡೆದ ದೇಶದ ಎರಡನೇ ಸಾಮೂಹಿಕ ಗುಂಡಿನ ದಾಳಿಯಲ್ಲಿ, ಸೆಂಟ್ರಲ್ ರಶಿಯಾದ ವಿಶ್ವವಿದ್ಯಾನಿಲಯದ ಆವರಣದಲ್ಲಿ ಬಂದೂಕುಧಾರಿ ಇಂದು (ಸೋಮವಾರ) ಗುಂಡಿನ ದಾಳಿ ನಡೆಸಿದ್ದು, 8 ಜನರನ್ನು ಕೊಂದಿದ್ದಾನೆ, 6 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಮಾಸ್ಕೋದಿಂದ ಪೂರ್ವಕ್ಕೆ 1,300 ಕಿಲೋಮೀಟರ್ (800 ಮೈಲಿ) ದೂರದಲ್ಲಿರುವ ಪೆರ್ಮ್ ನಗರದ ವಿಶ್ವವಿದ್ಯಾನಿಲಯದ … Continued

ಕರ್ನಾಟಕ ಸಿಇಟಿ -2021 ಫಲಿತಾಂಶ ಪ್ರಕಟ; 5 ವಿಭಾಗದಲ್ಲೂ ಮೊದಲ ಸ್ಥಾನ ಪಡೆದ ಮೈಸೂರಿನ ಮೇಘನ್‌..!..!

ಬೆಂಗಳೂರು: ಕರ್ನಾಟಕ ಸಿಇಟಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಇಂಜಿನಿಯರಿಂಗ್ (Engineering) , ಕೃಷಿ (Agriculture) , ನ್ಯಾಚುರೋಪಥಿ (Naturopathy) , ಪಶು ವೈದ್ಯಕೀಯ (Veterinary) , ಬಿ-ಫಾರ್ಮಾ ವಿಭಾಗದ ಫಲಿತಾಂಶ ಪ್ರಕಟಿಸಲಾಗಿದೆ. ಈ ಐದೂ ವಿಭಾಗಗಳಲ್ಲಿ ಮೈಸೂರಿನ ಪ್ರಮತಿ ಹಿಲ್ ವ್ಯೂ ಅಕಾಡೆಮಿಯ ಮೇಘನ್ ಹೆಚ್​.ಕೆ ಪ್ರಥಮ ಸ್ಥಾನ (CET First Rank) ಪಡೆದಿದ್ದಾರೆ. … Continued

ಲಸಿಕೆ ಹಾಕಿದ ಭಾರತೀಯರಿಗೆ ಸಂಪರ್ಕತಡೆ: ಪ್ರತಿಭಟನಾರ್ಥ ಬ್ರಿಟನ್‌ ಕಾರ್ಯಕ್ರಮಗಳಿಂದ ಹಿಂದೆ ಸರಿದ ಶಶಿ ತರೂರ್‌

ನವದೆಹಲಿ: ಬ್ರಿಟಿಷ್ ಸರ್ಕಾರವು ಜಾರಿಗೆ ತಂದಿರುವ ಕೋವಿಡ್‌-19 ಕ್ಯಾರೆಂಟೈನ್ ನಿಯಮಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್ ಬ್ರಿಟಿನ್‌ ನಲ್ಲಿ ನಡೆಯಲಿರುವ ಹಲವಾರು ಯೋಜಿತ ಕಾರ್ಯಕ್ರಮಗಳಿಂದ ಹಿಂದೆ ಸರಿದಿದ್ದಾರೆ. ಸಂಪೂರ್ಣ ಲಸಿಕೆ ಹಾಕಿದ ಭಾರತೀಯರನ್ನು ಸಂಪರ್ಕತಡೆಯನ್ನು ಕೇಳುವುದು ಆಕ್ರಮಣಕಾರಿ” ಎಂದು ಅವರು ಟ್ವೀಟರಿನಲ್ಲಿ ದೂರಿದ್ದಾರೆ. ಈ ಕಾರಣದಿಂದಾಗಿ ನಾನು ಕ್ಯಾಂಬ್ರಿಡ್ಜ್‌ನಲ್ಲಿ ನಯುವ ಕಾರ್ಯಕ್ರಮವೊಂದರಿಂದ ಹೊರಬಂದಿದ್ದೇನೆ ಮತ್ತು … Continued

ವಿದೇಶಿ ಏಜೆನ್ಸಿಗಳಿಗೆ ಭಾರತದ ರಕ್ಷಣಾ ಮಾಹಿತಿ ನೀಡುತ್ತಿದ್ದ ಬೆಂಗಳೂರಿನ ಬಟ್ಟೆ ವ್ಯಾಪಾರಿ ಬಂಧನ

ಬೆಂಗಳೂರು: ನಗರದ ಸಿಸಿಬಿ ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ವಿಭಾಗದ ಅಧಿಕಾರಿಗಳ ಜಂಟಿ ಕಾರ್ಯಾಚಾರಣೆಯಲ್ಲಿ ವಿದೇಶಿ ಏಜೆನ್ಸಿಗಳಿಗೆ ಭಾರತದ ರಕ್ಷಣಾ ಮಾಹಿತಿ ನೀಡುತ್ತಿದ್ದ ಯುವಕನೊಬ್ಬನ್ನು ಬಂಧಿಸಲಾಗಿದೆ. ಈತ ರಾಜಸ್ಥಾನ ಮೂಲದ ಈತ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದ ಎಂದು ಹೇಳಲಾಗಿದೆ. ಆರೋಪಿಯು ರಾಜಸ್ಥಾನದ ಬೆರ್ಮರ್ ಮೂಲದವನಾಗಿದ್ದು, ಬೆಂಗಳೂರಿನ ಕಾಟನ್ ಪೇಟೆಯ ಜಾಲಿ ಮೊಹಲ್ಲಾದಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದಾನೆ. ಸದರ್ನ್ … Continued

ರಾಜಕೀಯ ಮೈಲೇಜ್‌ಗಾಗಿ ತನ್ನ ಹೆಸರು ಬಳಸಿದ್ದಕ್ಕೆ ತಂದೆ-ತಾಯಿ ವಿರುದ್ಧವೇ ಕೋರ್ಟ್‌ ಮೆಟ್ಟಿಲೇರಿದ ತಮಿಳಿನ ಸೂಪರ್‌ ಸ್ಟಾರ್‌ ವಿಜಯ..!

ಚೆನ್ನೈ: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ಅವರು ತಮ್ಮ ತಂದೆ ತಾಯಿ ವಿರುದ್ಧವೇ ಕೋರ್ಟ್‌ ಮೆಟ್ಟಿಲೇರಿದ್ದಾರೆ. ತನ್ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ತಮ್ಮ ತಂದೆ-ತಾಯಿ ಸೇರಿದಂತೆ ಸೇರಿದಂತೆ 11 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದು,ಅವರ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದಾರೆ. ತನ್ನ ಹೆಸರು ಬಳಸಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ನನ್ನ ಹೆಸರಿನಲ್ಲಿ … Continued

ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಬೆಳಗಾವಿ ವಲಯ ಜಂಟಿ ನಿರ್ದೇಶಕರಾಗಿ ಬಸವರಾಜ ಹೂಗಾರ ಅಧಿಕಾರ ಸ್ವೀಕಾರ

ಬೆಳಗಾವಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಅಧಿಕಾರ ವಿಕೇಂದ್ರಿಕರಣದ ನಿಟ್ಟಿನಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೆ ಇಲಾಖೆಯ ಜಂಟಿ ನಿರ್ದೇಶಕರನ್ನು ನೇಮಿಸಿ ಆದೇಶ ಹೊರಡಿಸಿದ್ದು, ಬೆಳಗಾವಿ ಕಂದಾಯ ವಿಭಾಗಕ್ಕೆ ಬೆಳಗಾವಿ ವಲಯದ ಜಂಟಿ ನಿರ್ದೇಶಕರಾಗಿ ಬಸವರಾಜ ಹೂಗಾರ ಸೋಮವಾರ (ಸೆ.20) ಬೆಳಗಾವಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಬೆಳಗಾವಿ ವಲಯವು ಬೆಳಗಾವಿ, ಬಾಗಲಕೋಟ, ವಿಜಯಪುರ, ಹಾವೇರಿ, … Continued

ಪಂಜಾಬ್‌ನ 16ನೇ ಮುಖ್ಯಮಂತ್ರಿಯಾಗಿ ಚರಣ್‌ಜಿತ್ ಸಿಂಗ್ ಚನ್ನಿ ಪ್ರಮಾಣ ವಚನ ಸ್ವೀಕಾರ

ಚಂಡೀಗಡ: ಪಂಜಾಬಿನ 16ನೇ ಮುಖ್ಯಮಂತ್ರಿಯಾಗಿ ಚರಣ್‌ಜಿತ್ ಸಿಂಗ್ ಚನ್ನಿ ಇಂದು (ಸೋಮವಾರ) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ತಾಂತ್ರಿಕ ಶಿಕ್ಷಣ ಸಚಿವರಾಗಿದ್ದ 58 ವರ್ಷದ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಆಯ್ಕೆ ಮಾಡಲಾಗಿತ್ತು. ಇಂದು ರಾಜ್ಯಪಾಲರಾದ ಬನ್ವಾರಿಲಾಲ್‌ ಪುರೋಹಿತ್‌ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಬೋಧಿಸಿದರು. ಇದೇ ಮೊದಲ ಬಾರಿಗೆ ಪಂಜಾಬ್‌ನ … Continued

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ತಂತಿಗೆ ಕುತ್ತಿಗೆ ಸಿಲುಕಿ ಉಸಿರುಗಟ್ಟಿ ಗಂಡು ಜಿರಾಫೆ ಸಾವು

ಬೆಂಗಳೂರು: ಬನ್ನೇರು ಘಟ್ಟ ಜೈವಿಕ ಉದ್ಯಾನದಲ್ಲಿ ಆಕರ್ಷಣೆಯ ಕೇಂದ್ರವಾಗಿದ್ದ ಮೂರೂವರೆ ವರ್ಷದ ಜಿರಾಫೆ ಭಾನುವಾರ ದಾರುಣವಾಗಿ ಮೃತಪಟ್ಟಿದೆ. 11 ಅಡಿ ಎತ್ತರದ ಯದುನಂದನ ಎಂಬ ಹೆಸರಿನ ಗಂಡು ಚಿರತೆ ಆಹಾರ ತಿನ್ನಲು ಉದ್ಯಾನ ಆವರಣದ ತಂತಿಯಿಂದ ಕುತ್ತಿಗೆ ಹೊರಚಾಚಿದಾಗ ಅದರಲ್ಲಿ ಕುತ್ತಿಗೆ ಸಿಲುಕಿ ಬಿಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಜಿರಾಫೆ ಸೂಕ್ಷ್ಮ ಪ್ರಾಣಿಯಾಗಿರುವುದರಿಂದ ಉಸಿರುಗಟ್ಟಿ ಕೊನೆಯುಸಿರೆಳೆಯಿತು ಎಂದು ಉದ್ಯಾನದ … Continued

ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ದಾವಣಗೆರೆ : ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಾವಣಗೆರೆಯ ಭರತ್ ಕಾಲೋನಿಯ ಕೃಷ್ಣ ನಾಯ್ಕ್‌ (35) ಲಾರಿ ಚಾಲಕ, ಪತ್ನಿ ಸುಮಾ (30), ಮಗು ಧೃವ (6) ಆತ್ಮಹತ್ಯೆ ಮಾಡಿಕೊಂಡವರು   ಎಂದು ಗುರುತಿಸಲಾಗಿದೆ. ಕೃಷ್ಣಾ ನಾಯ್ಕ್ … Continued

ದ್ವಿತೀಯ ಪಿಯುಸಿ ಪರೀಕ್ಷೆ- 2021 ಫಲಿತಾಂಶ ಪ್ರಕಟ

ಬೆಂಗಳೂರು : ಪುನರಾವರ್ತಿತ ವಿದ್ಯಾರ್ಥಿಗಳು, ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳಿಗಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 18414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅವರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಪ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆಂದು … Continued